
ಉಡುಪಿ : ರಾಷ್ಟ್ರೀಯ ಹೆದ್ದಾರಿ ಬ್ರಹ್ಮಾವರ ಮಹೇಶ್ ಆಸ್ಪತ್ರೆ ಜಂಕ್ಷನ್‌ನಲ್ಲಿ ವೇಗವಾಗಿ ಬಂದ ಕಾರೊಂದು 14 ವರ್ಷದ ಬಾಲಕ ವಂಶಿ ಜಿ ಶೆಟ್ಟಿಗೆ ಢಿಕ್ಕಿ ಹೊಡೆದ ಪರಿಣಾಮ ಅವನು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಮೃತ ವಿದ್ಯಾರ್ಥಿ ವಂಶಿ ಜಿ ಶೆಟ್ಟಿ, ಎಸ್.ಎಮ್.ಎಸ್. ಶಾಲೆಯ 6ನೇ ತರಗತಿಯಲ್ಲಿ ಓದುತ್ತಿದ್ದನು. ನಿನ್ನೆ ಮಧ್ಯಾಹ್ನ ಸಮಯದಲ್ಲಿ ವಂಶಿ ರಸ್ತೆ ದಾಟುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ತಕ್ಷಣವೇ ಅವನನ್ನು ಮಹೇಶ್ ಆಸ್ಪತ್ರೆಗೆ ದಾಖಲಿಸಲಾಯಿತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವನು ಸಾವನ್ನಪ್ಪಿದ್ದಾನೆ.
ಘಟನೆಯ ಮಾಹಿತಿ ತಿಳಿದು, ಮಹೇಶ್ ಆಸ್ಪತ್ರೆ ಬಳಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳೀಯರು ಜಮಾಯಿಸಿದ್ದರು.ಮಹೇಶ್ ಆಸ್ಪತ್ರೆ ಜಂಕ್ಷನ್ ಅಪಘಾತ ವಲಯವಾಗಿದೆ ಮತ್ತು ಇಲ್ಲಿ ಹಿಂದಿನಿಂದಲೂ ಹಲವಾರು ಮಾರಣಾಂತಿಕ ಅಪಘಾತಗಳು ನಡೆದಿವೆ. ಸ್ಥಳೀಯರು ಸುರಕ್ಷತೆ ಕ್ರಮಗಳನ್ನು ಹೆಚ್ಚಿಸಲು ಮತ್ತು ಶಾಶ್ವತ ಪರಿಹಾರಗಳನ್ನು ಒದಗಿಸಲು ಕೇಳಿಕೊಂಡಿದ್ದಾರೆ.