
ಬೆಳ್ತಂಗಡಿ: ಯೂಟ್ಯೂಬ್‌ನಲ್ಲಿ ಅಶ್ಲೀಲವಾಗಿ ಮಾತನಾಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೆರೋಮ್ ಬರ್ಬೋಜಾ ಎಂಬುವವರು ನೀಡಿದ ದೂರಿನ ಆಧಾರದಲ್ಲಿ, ಪುನೀತ್ ಕೆರೆಹಳ್ಳಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 296 ಮತ್ತು ಬಿಎನ್‌ಎಸ್ 2023ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈ ಪ್ರಕರಣವು ಯೂಟ್ಯೂಬ್ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಬಳಸುವ ಭಾಷೆಯ ಕುರಿತು ವ್ಯಾಪಕ ಚರ್ಚೆಗೆ ಕಾರಣವಾಗಿದೆ.