
ನವದೆಹಲಿ: ಸಿಬಿಎಸ್ಇ (ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ) ಈವರ್ಷದ 10 ಮತ್ತು 12ನೇ ತರಗತಿ ಫಲಿತಾಂಶಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲಗಳನ್ನು ನೀಡಿದೆ. ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಮೊದಲೇ ವಿದ್ಯಾರ್ಥಿಗಳು ತಮ್ಮ ಉತ್ತರಪತ್ರಿಕೆಯ ನಕಲನ್ನು ಪಡೆಯಲು ಸಾಧ್ಯವಾಗುತ್ತದೆ.
ಹಿಂದಿನ ನಿಯಮ vs ಹೊಸ ಬದಲಾವಣೆ
ಇದಕ್ಕೆ ಮುಂಚೆ, ವಿದ್ಯಾರ್ಥಿಗಳು ಮೊದಲು ಮರುಮೌಲ್ಯಮಾಪನ ಅರ್ಜಿ ಸಲ್ಲಿಸಬೇಕಿತ್ತು, ಆನಂತರ ಮಾತ್ರ ಉತ್ತರಪತ್ರಿಕೆಯ ನಕಲು ದೊರಕುತ್ತಿತ್ತು. ಆದರೆ, ಈಗ ವಿದ್ಯಾರ್ಥಿಗಳು ಮೊದಲು ತಮ್ಮ ಉತ್ತರಪತ್ರಿಕೆಯನ್ನು ಪರಿಶೀಲಿಸಿಕೊಂಡು, ನಂತರ ಅಗತ್ಯ ಬಿದ್ದರೆ ಮಾತ್ರ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಥಿಗಳಿಗೆ ಪ್ರಯೋಜನ
ಈ ಹೊಸ ವ್ಯವಸ್ಥೆಯಿಂದ ವಿದ್ಯಾರ್ಥಿಗಳು ತಮ್ಮ ತಪ್ಪುಗಳನ್ನು ಮುಂಚೆತಾನೇ ಗಮನಿಸಿ, ಮರುಮೌಲ್ಯಮಾಪನಕ್ಕೆ ಸೂಕ್ತವಾಗಿ ನಿರ್ಧರಿಸಬಹುದು. ಇದರಿಂದ ಸಮಯ, ಹಣ ಮತ್ತು ಶ್ರಮ ಉಳಿತಾಯ ಆಗಲಿದೆ ಎಂದು ಸಿಬಿಎಸ್ಇ ಅಧಿಕಾರಿಗಳು ತಿಳಿಸಿದ್ದಾರೆ.
“ಈ ನಿರ್ಣಯವು ವಿದ್ಯಾರ್ಥಿಗಳಿಗೆ ಹೆಚ್ಚಿನ ಸ್ವಾತಂತ್ರ್ಯ ಮತ್ತು ಪಾರದರ್ಶಕತೆ ನೀಡುತ್ತದೆ,” ಎಂದು ಮಂಡಳಿ ಹೇಳಿದೆ.