ಕುಂದಾಪುರದಲ್ಲಿ ಸರ ಸುಲಿಗೆ ಪ್ರಕರಣ: ಚಿನ್ನ, ಕಾರು, ಬೈಕ್ ಸಹಿತ ಇಬ್ಬರು ಆರೋಪಿಗಳ ಬಂಧನ

Date:

spot_img

ಉಡುಪಿ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರ ಸುಲಿಗೆ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಕುಂದಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳನ್ನು ಶಿವಮೊಗ್ಗ ಜಿಲ್ಲೆಯ ಸೊರಬದ ಆನವಟ್ಟಿ ಗ್ರಾಮದ ಸಂಜಯ್ ಎಲ್ (33) ಮತ್ತು ದಾವಣಗೆರೆ ಜಿಲ್ಲೆಯ ವಿನೋಬನಗರದ ವಸಂತ ಕುಮಾರ್ (30) ಎಂದು ಗುರುತಿಸಲಾಗಿದೆ.

ಪ್ರಕರಣದ ವಿವರ ಮತ್ತು ಜಪ್ತಿ

ಮೀನಾಕ್ಷಿ ಎಂಬವರು ತಮ್ಮ ಮಗಳೊಂದಿಗೆ ಕುಂದಾಪುರದ ಶಾಸ್ತ್ರೀ ಸರ್ಕಲ್‌ಗೆ ಸರ್ವಿಸ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಹಿಂದಿನಿಂದ ಬೈಕ್‌ನಲ್ಲಿ ಬಂದ ಈ ಇಬ್ಬರು ಆರೋಪಿಗಳು ಅವರ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿಗಳನ್ನು ಬಂಧಿಸಿದ ಪೊಲೀಸರು, ಬಂಧಿತರಿಂದ ₹3 ಲಕ್ಷ ಮೌಲ್ಯದ ಚಿನ್ನದ ಕರಿಮಣಿ ಸರ, ಕೃತ್ಯಕ್ಕೆ ಬಳಸಿದ್ದ ಸ್ಕಾರ್ಫಿಯೋ ಕಾರು ಮತ್ತು ಬೈಕ್ ಸಹಿತ ಒಟ್ಟು ₹8.20 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಖರ್ಗೆ ವಾಗ್ದಾಳಿ: ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ತೀವ್ರ ಆಕ್ರೋಶ

ನೀಟ್ ಅಕ್ರಮ ಹಾಗೂ ಮಂದಿರದ ಟ್ರಸ್ಟ್ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ಧ: ಸಿಎಂ ಡಿ.ಕೆ. ಶಿವಕುಮಾರ್

ವಿದ್ಯುತ್ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಹಾಗೂ ಕೆಪಿಸಿಎಲ್ ಸಂಸ್ಥಾಪನಾ ದಿನದ ಪೂರ್ಣ ಮಾಹಿತಿ ಇಲ್ಲಿದೆ ಓದಿ.