ಚಾಮುಂಡಿಬೆಟ್ಟದ ಅರ್ಚಕ ರಾಜು ಹೃದಯಾಘಾತದಿಂದ ನಿಧನ

Date:

spot_img

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ವಿಧ್ಯುಕ್ತವಾಗಿ ಚಾಲನೆ ದೊರೆತ ಮರುದಿನವೇ ದುರಂತವೊಂದು ಸಂಭವಿಸಿದೆ. ಚಾಮುಂಡಿಬೆಟ್ಟದ ಪ್ರಸಿದ್ಧ ಚಾಮುಂಡೇಶ್ವರಿ ದೇಗುಲದ ಅರ್ಚಕ ರಾಜು ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಕಾರಣದಿಂದಾಗಿ ದೇವಾಲಯದ ಗರ್ಭಗುಡಿಗೆ ಮಂಗಳವಾರ ತೆರೆ ಎಳೆಯಲಾಗಿದೆ.

ಕಳೆದ ಹಲವು ವರ್ಷಗಳಿಂದ ದೇವಾಲಯದಲ್ಲಿ ಶಿವನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದ ರಾಜು ಅವರ ಹಠಾತ್ ನಿಧನದಿಂದ ಚಾಮುಂಡಿಬೆಟ್ಟದಲ್ಲಿ ಸೂತಕದ ಛಾಯೆ ಆವರಿಸಿದೆ. ಈ ಘಟನೆಯಿಂದಾಗಿ ಇಂದು ರಾತ್ರಿವರೆಗೂ ಮೂಲ ವಿಗ್ರಹದ ದರ್ಶನ ಇರುವುದಿಲ್ಲ. ಆದಾಗ್ಯೂ, ಉತ್ಸವಮೂರ್ತಿಯ ದರ್ಶನಕ್ಕೆ ಮಾತ್ರ ಭಕ್ತಾದಿಗಳಿಗೆ ಅವಕಾಶ ಕಲ್ಪಿಸಲಾಗಿದೆ.

ಅರ್ಚಕರ ಅಂತ್ಯಸಂಸ್ಕಾರದ ಬಳಿಕ ಗರ್ಭಗುಡಿಯ ಬಾಗಿಲು ತೆರೆಯಲಾಗುವುದು. ಉಳಿದಂತೆ ದಸರಾ ನವರಾತ್ರಿ ಪೂಜೆಗಳು ಮತ್ತು ಧಾರ್ಮಿಕ ವಿಧಿವಿಧಾನಗಳು ಎಂದಿನಂತೆಯೇ ಮುಂದುವರಿಯಲಿವೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ. ದಸರಾ ಆರಂಭಗೊಂಡ ಮರುದಿನವೇ ಸಂಭವಿಸಿದ ಈ ದುರ್ಘಟನೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗಳು ಆರಂಭಗೊಂಡಿವೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.