
ಬ್ರಹ್ಮಾವರ: ತಾಲ್ಲೂಕಿನ ಚೇರ್ಕಾಡಿಯ ರಾಷ್ಟ್ರೋತ್ಥಾನ ಶಾಲೆಗೆ ಇತ್ತೀಚೆಗೆ ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲಾ ಸಮಿತಿಯ ಪ್ರಮುಖರು ಭೇಟಿ ನೀಡಿ, ಸಂಸ್ಥೆಯ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಚಟುವಟಿಕೆಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ವಿದ್ಯಾಭಾರತಿ ಕರ್ನಾಟಕ ಪ್ರಾಂತ ಉಪಾಧ್ಯಕ್ಷರಾದ ಗುರುದಾಸ ಶೆಣೈ ಹೆಬ್ರಿ, ಉಡುಪಿ ಜಿಲ್ಲಾಧ್ಯಕ್ಷರಾದ ಪಾಂಡುರಂಗ ಪೈ ಸಿದ್ಧಾಪುರ ಹಾಗೂ ಜಿಲ್ಲಾ ಕಾರ್ಯದರ್ಶಿ ಮಹೇಶ ಹೈಕಾಡಿ ಅವರು ಶಾಲೆಯ ಕಾರ್ಯವೈಖರಿಯನ್ನು ವೀಕ್ಷಿಸಿದರು. ರಾಷ್ಟ್ರೋತ್ಥಾನ ಸಂಸ್ಥೆಯ ಆಡಳಿತಾಧಿಕಾರಿ ಸುರೇಶ್ ಹೆಜಮಾಡಿ ಅವರು ಅತಿಥಿಗಳನ್ನು ಸ್ವಾಗತಿಸಿ, ಸಂಸ್ಥೆಯ ಮುಂದಿನ ಅಭಿವೃದ್ಧಿ ಯೋಜನೆಗಳು ಮತ್ತು ಶೈಕ್ಷಣಿಕ ಸ್ವರೂಪದ ಬಗ್ಗೆ ಸಮಗ್ರ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಶಾಲೆಯ ಪ್ರಧಾನಾಚಾರ್ಯೆ ಪೂರ್ಣಿಮಾ ಎಸ್. ಹಾಗೂ ಪದವಿಪೂರ್ವ ಕಾಲೇಜು ವಿಭಾಗದ ಪ್ರಾಂಶುಪಾಲೆ ಶ್ರೀಮತಿ ಭಾಗ್ಯಲಕ್ಷ್ಮಿ ಉಪಸ್ಥಿತರಿದ್ದು, ಬೋಧನಾ ಕ್ರಮಗಳ ಕುರಿತು ಮಾಹಿತಿ ಹಂಚಿಕೊಂಡರು.




































