ದಕ್ಷ ಸೇವೆಗಾಗಿ ಮುಖ್ಯಮಂತ್ರಿ ಪದಕ ಪುರಸ್ಕೃತ ಇನ್ಸ್‌ಪೆಕ್ಟರ್ ಮಹೇಶ್ ಪ್ರಸಾದ್ ಮಣಿಪಾಲ ಠಾಣೆಗೆ ವರ್ಗಾವಣೆ

Date:

spot_img

ಉಡುಪಿ : ಪೊಲೀಸ್ ಇಲಾಖೆಯಲ್ಲಿ ಶ್ರೇಷ್ಠ ಸೇವೆ ಸಲ್ಲಿಸಿ “ದಕ್ಷ ಅಧಿಕಾರಿ” ಎಂಬ ಗೌರವಕ್ಕೆ ಪಾತ್ರರಾಗಿರುವ ಸುರತ್ಕಲ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮಹೇಶ್ ಪ್ರಸಾದ್ ಅವರು ಇದೀಗ ಮಣಿಪಾಲ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡು ಕರ್ತವ್ಯಕ್ಕೆ ಅಧಿಕೃತವಾಗಿ ಹಾಜರಾಗಿದ್ದಾರೆ.

ಮೂಲತಃ ಪುತ್ತೂರು ಮೂಲದವರಾಗಿರುವ ಮಹೇಶ್ ಪ್ರಸಾದ್ ಅವರು ತಮ್ಮ ಪೊಲೀಸ್ ಸೇವೆಯನ್ನು ಬಂಟ್ವಾಳ, ಹಿರಿಯಡ್ಕ, ಕೋಟ, ಶೃಂಗೇರಿ ಹಾಗೂ ಬೆಂಗಳೂರಿನ ಹಲವು ಠಾಣೆಗಳಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಪ್ರಾಮಾಣಿಕವಾಗಿ ನಿರ್ವಹಿಸಿದ್ದಾರೆ. ಬಳಿಕ ಸಿಸಿಬಿ ವಿಭಾಗದಲ್ಲಿಯೂ ಕಾರ್ಯನಿರ್ವಹಿಸಿ, ಐಸಿಸ್ ಉಗ್ರ ಸಂಘಟನೆಗೆ ಸಂಪರ್ಕ ಹೊಂದಿದ್ದವರನ್ನು ಬಂಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿ ಗಮನಸೆಳೆದಿದ್ದರು.

ಇತ್ತೀಚೆಗಷ್ಟೇ ಮಂಗಳೂರಿನ ಕೋಟೆಕಾರ್ ಪ್ರದೇಶದಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಆರೋಪಿಗಳನ್ನು ಪತ್ತೆಹಚ್ಚಿ ಯಶಸ್ವಿ ತನಿಖೆ ನಡೆಸಿದ ಕಾರಣ ಇವರಿಗೆ “ಮುಖ್ಯಮಂತ್ರಿ ಪದಕ” ಪ್ರಶಸ್ತಿ ನೀಡಲಾಗಿತ್ತು. ಈ ಸಾಧನೆಯಿಂದ ಇವರಿಗಿರುವ ಅಪಾರ ಕೌಶಲ್ಯ ಮತ್ತೊಮ್ಮೆ ಸಾಬೀತಾಯಿತು.

ಪ್ರಸ್ತುತ ಉಡುಪಿಯ ಬ್ರಹ್ಮಾವರ ತಾಲೂಕಿನ ಚೇರ್ಕಾಡಿ ನಿವಾಸಿಯಾಗಿರುವ ಮಹೇಶ್ ಪ್ರಸಾದ್ ಅವರು ಸುರತ್ಕಲ್ ಠಾಣೆಯಿಂದ ಬೀಳ್ಕೊಡಲಾದ ಸಂದರ್ಭದಲ್ಲಿ ಸಹೋದ್ಯೋಗಿಗಳು ಗೌರವಪೂರ್ವಕವಾಗಿ ಬೀಳ್ಕೊಟ್ಟು ಹರ್ಷಭಾವದಿಂದ ವಿದಾಯ ಹೇಳಿದರು. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಅವರು ಹೊಸ ಕರ್ತವ್ಯಕ್ಕೆ ಹಾಜರಾಗಿದ್ದು, ಸಾರ್ವಜನಿಕರ ಭದ್ರತೆಗಾಗಿ ತಮ್ಮ ಸೇವೆಯನ್ನು ಮುಂದುವರೆಸುತ್ತಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.