ಚಿಕ್ಕಮಗಳೂರು: ಆನೆ ದಾಳಿಗೆ ಬಲಿಯಾದ 58 ವರ್ಷದ ರೈತ

Date:

spot_img

ಚಿಕ್ಕಮಗಳೂರು: ತರೀಕೆರೆ ತಾಲೂಕಿನ ಗುರುಪುರ ಗ್ರಾಮದಲ್ಲಿ ಆನೆ ದಾಳಿಗೆ ರೈತ ಮೃತಪಟ್ಟ ಘಟನೆ ಸೋಮವಾರ (ಮಾರ್ಚ್ 31) ನಡೆದಿದೆ. ವೆಂಕಟೇಶ್ (58) ಮೃತ ರೈತ.

ಏಕಾಂಗಿ ಸಲಗದ ಅಟ್ಟಹಾಸ :
ಬೆಳಗಿನ ಜಾವ ತನ್ನ ತೋಟದಲ್ಲಿ ಹಸುಗಳನ್ನು ಕಟ್ಟುತ್ತಿದ್ದ ವೇಳೆ ಒಂಟಿ ಸಲಗವು ದಾಳಿ ಮಾಡಿದೆ. ಆನೆ ಉಸಿರಾಟದ ಶಬ್ದ ಕೇಳಿ ಗಮನಿಸಿದ ವೆಂಕಟೇಶ್ ಟಾರ್ಚ್ ಬೆಳಗಿಸಿದ್ದಾನೆ. ಆದರೆ, ಬೆಳಕು ನೋಡುತ್ತಿದ್ದಂತೆಯೇ ಆನೆ ಆಕ್ರೋಶಗೊಂಡು ರೈತನನ್ನು ಸೊಂಡಿಲಿನಿಂದ ಹಿಡಿದು ತೆಂಗಿನ ಮರಕ್ಕೆ ಹೊಡೆದು ಬಿಸಾಕಿದೆ. ಪರಿಣಾಮ ಸ್ಥಳದಲ್ಲೇ ಅವರು ಪ್ರಾಣ ಕಳೆದುಕೊಂಡಿದ್ದಾರೆ.

ಸಾರ್ವಜನಿಕರಿಂದ ಮನವಿ :
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಕ್ಕವಳ್ಳಿ ಹೋಬಳಿ ನಿವಾಸಿಗಳು ಈ ಒಂಟಿ ಸಲಗದ ಹಾವಳಿಯಿಂದ ತೀವ್ರ ಅಸಮಾಧಾನಗೊಂಡಿದ್ದು, ಕೇವಲ ಪರಿಹಾರ ನೀಡುವುದರಿಂದ ಸಮಸ್ಯೆ ಪರಿಹಾರವಾಗದು ಎಂದು ಅಭಿಪ್ರಾಯಪಟ್ಟಿದ್ದಾರೆ. ಆನೆಯನ್ನು ಬೇಗ ಸ್ಥಳಾಂತರಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಲ್ಲಿ ಸಾರ್ವಜನಿಕರು ಒತ್ತಾಯಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.