ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ದುರಂತ!”ನಾನು ಎಂದಿಗೂ ರೋಡ್ ಶೋಗಳ ಬೆಂಬಲಿಗನಲ್ಲ”:ಗೌತಮ್ ಗಂಭೀರ್

Date:

spot_img

ಬೆಂಗಳೂರು : ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್ ಸಿ ಬಿ ವಿಜಯೋತ್ಸವದಲ್ಲಿ ಅಪಾರ ಅಭಿಮಾನಿಗಳು ಭಾಗವಹಿಸಿದ ಪರಿಣಾಮ ಭೀಕರ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದ್ದು, 11 ಮಂದಿ ದುರಂತವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆ ದೇಶದಾದ್ಯಂತ ಆಘಾತ ಉಂಟುಮಾಡಿದ್ದು, ಟೀಂ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ ಈ ಕುರಿತು ತೀವ್ರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮುಂಬರುವ ಟೆಸ್ಟ್ ಸರಣಿಗೆ ಮುನ್ನ ನಾಯಕ ಶುಭಮನ್ ಗಿಲ್ ಜೊತೆಗೆ ಪತ್ರಿಕಾಗೋಷ್ಠಿ ನಡೆಸಿದ ಗಂಭೀರ್, “ಬೆಂಗಳೂರು ದುರಂತ ಅತ್ಯಂತ ದುರ್ಘಟನೆಯಾಗಿದೆ. ನಾನು ಎಂದಿಗೂ ರೋಡ್ ಶೋಗಳ ಬೆಂಬಲಿಗನಲ್ಲ. 2007ರ ಟಿ-20 ವಿಶ್ವಕಪ್ ಗೆದ್ದಾಗಲೂ ನಾನು ಈ ಮಾತನ್ನೇ ನಂಬಿದ್ದೆ. ಜನರ ಜೀವಗಳು ನಮಗೆ ಮುಖ್ಯ. ಇಂತಹ ಕಾರ್ಯಕ್ರಮಗಳಲ್ಲಿ ಸೂಕ್ತ ಜವಾಬ್ದಾರಿ ಮತ್ತು ಸಿದ್ಧತೆ ಇಲ್ಲದಿದ್ದರೆ, ಮುಂದುವರಿಯುವುದು ಸರಿಯಲ್ಲ,” ಎಂದು ಹೇಳಿಕೆ ನೀಡಿದರು.

“ನಾವು 11 ಅಮೂಲ್ಯ ಜೀವಗಳನ್ನು ಕಳೆದುಕೊಂಡಿದ್ದೇವೆ. ಇದು ಕ್ಷಮಿಸಲಾಗದ ತಪ್ಪು. ಇಂತಹ ತಪ್ಪುಗಳು ಭವಿಷ್ಯದಲ್ಲಿ ನಡೆಯಬಾರದು. ಇವೆಲ್ಲವುಗಳಿಗಿಂತ ಮೌಲ್ಯವಾದದ್ದು ಪ್ರೇಕ್ಷಕರ ಜೀವ. ನಾವು ಹೆಚ್ಚು ಜವಾಬ್ದಾರಿಯಾಗಿ, ಜಾಗರೂಕರಾಗಿ ನಡೆದುಕೊಳ್ಳಬೇಕು,” ಎಂದು ಗಂಭೀರ್ ಹೇಳಿದರು.

ಈ ಸಂದರ್ಭದಲ್ಲಿ ಬಿಸಿಸಿಐ ಮತ್ತು ಸ್ಥಳೀಯ ಆಡಳಿತದ ಭೂಮಿಕೆಯ ಬಗ್ಗೆ ಸಾರ್ವಜನಿಕರು ಪ್ರಶ್ನೆ ಎತ್ತಿದ್ದು, ಭದ್ರತೆಗಾಗಿ ಮುಂದಿನ ದಿನಗಳಲ್ಲಿ ಕ್ರಿಕೆಟ್ ನಂತಹ ಬೃಹತ್ ಸಮಾರಂಭಗಳ ಮೇಲೆ ಹೊಸ ಮಾರ್ಗಸೂಚಿಗಳು ಜಾರಿಯಾಗುವ ನಿರೀಕ್ಷೆಯಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ನೀಟ್ ಪ್ರತಿಭಟನೆ ಮೇಲಿನ ಬಲಪ್ರಯೋಗ ಖಂಡನೀಯ: ಉದಯ ಶೆಟ್ಟಿ

ದೆಹಲಿಯಲ್ಲಿ ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲಿನ ಬಲಪ್ರಯೋಗವನ್ನು ಉದಯ ಶೆಟ್ಟಿ ಮುನಿಯಾಲು ತೀವ್ರವಾಗಿ ಖಂಡಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳ: ಕಥೋಲಿಕ್ ಸಭಾವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ

ಕಾರ್ಕಳದ ಅತ್ತೂರು ಬಸಿಲಿಕಾದಲ್ಲಿ ಕಥೋಲಿಕ್ ಸಭಾವತಿಯಿಂದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಾಡಿಗೆ ಸಂಗಾತಿ ಉದ್ಯಮ: ಒಂಟಿತನಕ್ಕೆ ತಾತ್ಕಾಲಿಕ ಪರಿಹಾರವೇ?

ಬೆಳೆಯುತ್ತಿರುವ ಬಾಡಿಗೆ ಸಂಗಾತಿ ಸಂಸ್ಕೃತಿಯ ಸಂಪೂರ್ಣ ವಿಶ್ಲೇಷಣೆ ಮತ್ತು ಉದ್ಯಮದ ಪ್ರಮುಖ ವಿವರಗಳು. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.