
ಮಂಗಳೂರು : ಧರ್ಮಸ್ಥಳದಲ್ಲಿ ಶವಗಳನ್ನು ಹೂತಿದ್ದಾಗಿ ಸುಳ್ಳು ಹೇಳಿಕೆ ನೀಡಿದ್ದ ಚಿನ್ನಯ್ಯ ಅಲಿಯಾಸ್ ಮಾಸ್ಕ್ಮ್ಯಾನ್ನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿರುವ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಪ್ರತಿಕ್ರಿಯಿಸಿದ್ದಾರೆ.
ಸದಾಶಿವನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಒಂದೊಂದೇ ಸತ್ಯ ಸಂಗತಿಗಳು ಈಗ ಹೊರಬರುತ್ತಿವೆ. ಅದರ ಬಗ್ಗೆ ನಾನು ಈಗ ಮಾತನಾಡುವುದಿಲ್ಲ. ಈಗ ಎಲ್ಲ ಆರೋಪಗಳಿಂದ ತೊಳೆದಂತಾಗಿದೆ” ಎಂದು ಹೇಳಿದರು.
ಈ ಸಂದರ್ಭದಲ್ಲಿ ತಮ್ಮ ಕ್ಷೇತ್ರದ ಮೇಲೆ ಜನರ ಪ್ರೀತಿ ಮತ್ತು ವಿಶ್ವಾಸ ಹೀಗೆಯೇ ಮುಂದುವರಿಯಲಿ, ಹಾಗೂ ದೇವರ ಆಶೀರ್ವಾದ ಸದಾ ಇರಲಿದೆ ಎಂದು ಅವರು ಹಾರೈಸಿದರು. ಮಾಸ್ಕ್ ಮ್ಯಾನ್ ಬಂಧನವು ಧರ್ಮಸ್ಥಳ ಸಂಸ್ಥೆಯ ಮೇಲೆ ಕೇಳಿಬಂದಿದ್ದ ಆರೋಪಗಳಿಗೆ ಒಂದು ರೀತಿ ಪೂರ್ಣವಿರಾಮ ಇಟ್ಟಂತಾಗಿದೆ.