ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಜೀವ ಬೆದರಿಕೆ: ಇಮೇಲ್ ಸಂದೇಶದಿಂದ ಆತಂಕ

Date:

spot_img

ಬೆಂಗಳೂರು : ರಾಜ್ಯದ ಮುಖ್ಯಮಂತ್ರಿಯರಾದ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಇಮೇಲ್ ಮೂಲಕ ಗಂಭೀರ ಜೀವ ಬೆದರಿಕೆ ಬಂದಿರುವ ಘಟನೆ ಭಾರಿ ಚರ್ಚೆಗೆ ಕಾರಣವಾಗಿದೆ. ‘ಸಿಂಧಾ ರಜಪೂತ್’ ಎಂಬ ಹೆಸರಿನ ಇಮೇಲ್ ವಿಳಾಸದಿಂದ ಈ ಸಂದೇಶ ಬಂದಿದ್ದು, ಇಬ್ಬರನ್ನು ಹತ್ಯೆಗೈದು ಟ್ರಾಲಿ ಬ್ಯಾಗ್‌ಗಿನಲ್ಲಿ ಹಾಕಿ ಫ್ರಿಡ್ಜ್‌ನಲ್ಲಿ ಇಡುವುದಾಗಿ ಹೇಳಲಾಗಿದೆ.

ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಾಗಿದ್ದು, ಸೈಬರ್ ಕ್ರೈಂ ಪೊಲೀಸರು ಪ್ರಕರಣದ ತೀವ್ರ ತನಿಖೆಗೆ ಮುಂದಾಗಿದ್ದಾರೆ. ಮೂಲದ ಶೋಧ ಮತ್ತು ಇಮೇಲ್‌ ಕಳುಹಿಸಿರುವ ವ್ಯಕ್ತಿಯ ಹಿನ್ನಲೆಯಲ್ಲಿ ತನಿಖೆ ನಡೆಯುತ್ತಿದೆ.

ಇದೇ ಇಮೇಲ್‌ ಪ್ರತಿಯನ್ನು ಗೃಹ ಸಚಿವರು ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೂ ಕಳುಹಿಸಲಾಗಿದೆ. ಇನ್ನು ಅದೇ ಸಂದೇಶದಲ್ಲಿ ರಾಮಪುರದ ಪ್ರಭಾಕರ್ ಎಂಬ ವ್ಯಕ್ತಿಗೆ ಒಂದು ಕೋಟಿ ರೂ. ಸಾಲ ಕೊಟ್ಟಿದ್ದು, ತಕ್ಷಣದಲ್ಲಿ ಹಿಂದಿರುಗಿಸದಿದ್ದರೆ ಆತನನ್ನು ಸಹ ಹತ್ಯೆಗೊಳಿಸುತ್ತೇನೆ ಎಂಬ ಬೆದರಿಕೆಯೂ ಇದೆ. ಪ್ರಭಾಕರ್‌ನ ಕುಟುಂಬದ ವಿವರಗಳು ಹಾಗೂ ಅವನ ಮಗನ ಮದುವೆ ಕುರಿತ ಮಾಹಿತಿಯೂ ಇದರಲ್ಲಿ ಉಲ್ಲೇಖಿಸಲಾಗಿದೆ.

ಪೊಲೀಸರು ಈ ಇಮೇಲ್‌ನ ಹಿಂದಿರುವ ವ್ಯಕ್ತಿ ಅಥವಾ ಸಂಘಟನೆ ಬಗ್ಗೆ ಸೂಕ್ಷ್ಮ ತನಿಖೆ ನಡೆಸುತ್ತಿದ್ದಾರೆ. ಪ್ರಸ್ತುತ ಇದು ಕಿಡಿಗೇಡಿಗಳ ಕೃತ್ಯವೆಂದು ಶಂಕಿಸಲಾಗಿದೆ. ಸರ್ಕಾರದ ಹಿರಿಯ ನಾಯಕರ ಭದ್ರತೆಯ ಬಗ್ಗೆ ಇದೀಗ ಹೊಸ ಚರ್ಚೆ ನಡೆಯುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ನೀಟ್ ಹಗರಣ: ಸೋನಂ ವಾಂಗ್ಚುಕ್ ಉಪವಾಸ ಅಂತ್ಯಕ್ಕೆ 3 ಷರತ್ತು

ನೀಟ್ ಪತ್ರಿಕೆ ಸೋರಿಕೆ ಖಂಡಿಸಿ ಉಪವಾಸ ನಿರತರಾಗಿರುವ ಸೋನಂ ವಾಂಗ್ಚುಕ್ ಸತ್ಯಾಗ್ರಹ ಅಂತ್ಯಗೊಳಿಸಲು 3 ಪ್ರಮುಖ ಷರತ್ತು ವಿಧಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಆತ್ರಾಡಿ ಶಾಂಭವಿ ಹೋಟೆಲ್ ಆಟಿ ಆಹಾರ ಉತ್ಸವ

ಉಡುಪಿಯ ಶಾಂಭವಿ ಹೋಟೆಲ್‌ನಲ್ಲಿ ಜುಲೈ 24 ರಿಂದ ಸಾಂಪ್ರದಾಯಿಕ 'ಆಟಿ ದ ಒಂಜಿ ಊಟ' ಆಹಾರ ಉತ್ಸವ ಆರಂಭವಾಗಲಿದ್ದು, ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.