ಫೆ.25 ಕಾರ್ಕಳಕ್ಕೆ ಮುಖ್ಯಮಂತ್ರಿ ಭೇಟಿ : ಕಾರ್ಕಳ ಕಾಂಗ್ರೆಸ್ ಪೂರ್ವಭಾವಿ ಸಭೆ

Date:

spot_img

ಕಾರ್ಕಳ : ಇದೇ ಬರುವ ಪೆಬ್ರವರಿ 25 ರಂದು ಕಿಸಾನ್ ಸಭಾಂಗಣದ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಮಿಸುತ್ತಿರುವ ಹಿನ್ನಲೆಯಲ್ಲಿ ಕಾರ್ಕಳ ಕಾಂಗ್ರೆಸ್ ಪೂರ್ವಭಾವಿ ಸಭೆಯು ನಡೆಯಿತು.

ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು, ಮಾಜಿ ಮುಖ್ಯಮಂತ್ರಿಗಳಾದ ಡಾ.ಎಮ್. ವೀರಪ್ಪ ಮೊಯಿಲಿಯವರ ನೇತೃತ್ವದಲ್ಲಿ ನಿರ್ಮಾಣವಾದ ಕಿಸಾನ್ ಸಭಾದ ಸಭಾಂಗಣ ಉದ್ಘಾಟನೆಗೆ ಗ್ಯಾರಂಟಿ ಯೋಜನೆಗಳ ಸರದಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾರ್ಕಳಕ್ಕೆ ಆಗಮಿಸುತ್ತಿರುವುದು ಅತ್ಯಂತ ಹೆಮ್ಮೆಯ ಕ್ಷಣಗಳು, ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸಲು ಎಲ್ಲರೂ ಕೈಜೋಡಿಸಬೇಕೆಂದು ಅವರು ಕರೆ ನೀಡಿದರು.

ಶಿಕ್ಷಣ ವಂಚಿತರಾಗಿ ಶಿಕ್ಷಣ ವಂಚಿತರಾದ ವಿದ್ಯಾರ್ಥಿಗಳಿಗೆಂದು ಕಿಸಾನ್ ಸಭಾ ಶಾಲೆಯನ್ನು ಅಂದಿನ ದಿನಗಳಲ್ಲಿ ಸ್ಥಾಪನೆ ಮಾಡಲಾಗಿತ್ತು, ಹಾಗೂ ರೈತರ ಪರವಾಗಿ ಕಾರ್ಕಳದ ಮೂಲೆ ಮೂಲೆಗಳಲ್ಲಿ ಹೋರಾಟ ಮುಂತಾದ ಚಟುವಟಿಕೆಗಳನ್ನು ನಡೆಸಲಾಗಿತ್ತು, ಆ ಸಂದರ್ಭದಲ್ಲಿ ಸ್ಥಾಪನೆಯಾದ ಕಿಸಾನ್ ಸಭಾದ ಸಭಾಂಗಣವು ನಿರ್ಮಾಣವಾಗಿ ಉದ್ಘಾಟನೆಗೊಳ್ಳುತ್ತಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಹಿರಿಯ ಕಾಂಗ್ರೆಸ್ ನಾಯಕರಾದ ಶೇಖರ ಮಡಿವಾಳ ಹೇಳಿದರು.

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದ್ ರಾವ್ ಮಾತನಾಡಿ ಜನಪರ ಯೋಜನೆಗಳ ಮೂಲಕ ಜನಮನವನ್ನು ಗೆದ್ದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾರ್ಕಳಕ್ಕೆ ಆಗಮಿಸುತ್ತಿರುವುದು ಅತ್ಯಂತ ಸಂತಸ ಮತ್ತು ಹೆಮ್ಮೆಯ ವಿಚಾರವಾಗಿದೆ, ಮಾನ್ಯ ಮುಖ್ಯಮಂತ್ರಿಗಳನ್ನು ಸ್ವಾಗತಿಸಲು ನಾವೆಲ್ಲರೂ ಉತ್ಸೂಕರಾಗಿದ್ದೇವೆ, ಈ ನಿಟ್ಟಿನಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಹೆಬ್ರಿ ಬ್ಲಾಕ್ ಅಧ್ಯಕ್ಷರಾದ ಗೋಪೀನಾಥ್ ಭಟ್, ಜಿಲ್ಲಾ ಉಪಾಧ್ಯಕ್ಷರಾದ ಸುಧಾಕರ ಕೋಟ್ಯಾನ್, ಬ್ಲಾಕ್ ಉಪಾಧ್ಯಕ್ಷರಾದ ಜಾರ್ಜ್ ಕ್ಯಾಸ್ತಲಿನೊ, ಅಬ್ದುಲ್ ಸಾಣೂರು, ಅಜಿತ್ ಹೆಗ್ಡೆ ಮಾಳ, ಶ್ರೀಮತಿ ಭಾನು ಭಾಸ್ಕರ್ ಪೂಜಾರಿ, ಮಲಿಕ್ ಅತ್ತೂರು, ಸಿರಿಯಣ್ಣ ಶೆಟ್ಟಿ, ಕೆ.ಎಮ್.ಎಫ್ ನಿರ್ದೇಶಕರಾದ ಸುಧಾಕರ ಶೆಟ್ಟಿ ಮುಡಾರು, ಅನಿಲ್ ಪೂಜಾರಿ ನೆಲ್ಲಿಗುಡ್ಡೆ ಮೊದಲಾದವರು ಉಪಸ್ಥಿತರಿದ್ದರು.

ಬ್ಲಾಕ್ ವಕ್ತಾರ ಪ್ರದೀಪ್ ಬೇಲಾಡಿ ಸ್ವಾಗತಿಸಿ ಶೇಖ್ ಶಭೀರ್ ಮಿಯ್ಯಾರು ಧನ್ಯವಾದವಿತ್ತರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.