spot_img

ಕಲರ್ಸ್ ಕನ್ನಡದಲ್ಲಿಎರಡು ಹೊಚ್ಚ ಹೊಸ ಧಾರಾವಾಹಿಗಳು…

Date:

ಮಂಗಳೂರು: ಕನ್ನಡ ವೀಕ್ಷಕರ ಮನಸಿಗೆ ಲಗ್ಗೆಯಿಡುವ ಕತೆಗಳನ್ನು ಹೇಳುತ್ತಾ ಬಂದಿರುವ ಕಲರ್ಸ್ ಕನ್ನಡ ಚಾನೆಲ್, ಇದೀಗ ಮತ್ತೆರೆಡು ಹೊಸ ಧಾರಾವಾಹಿಗಳನ್ನು ನಿಮ್ಮ ಮುಂದೆ ತರಲು ಸಜ್ಜಾಗಿದೆ. ‘ವಧು’ ಮತ್ತು ‘ಯಜಮಾನ’ ದೈನಿಕ ಧಾರಾವಾಹಿಗಳು ಜ,27ರಂದು ಜೋಡಿ ಕತೆಗಳಾದ ಡಿವೋರ್ಸ್ ಲಾಯರ್ ಮದುವೆ ಕತೆ ‘ವಧು’ ರಾತ್ರಿ 9.30ಕ್ಕೆ ಪ್ರಸಾರವಾಗಲಿದೆ. ಕಾಂಟ್ರಾಕ್ಟ್ ಮದುವೆಯ ಕತೆ ‘ಯಜಮಾನ’ ರಾತ್ರಿ 10 ಗಂಟೆಗೆ ಪ್ರಸಾರವಾಗಲಿದೆ. ಸಂಬಂಧಗಳನ್ನು ಪ್ರೀತಿಸುವ, ಅಷ್ಟೇ ಗೌರವಿಸುವ ‘ವಧು’ ಒಬ್ಬ ಅವಿವಾಹಿತೆ, ವೃತ್ತಿಯಲ್ಲಿ ಡಿವೋರ್ಸ್ ಲಾಯರ್. ಮನುಷ್ಯ ಸಂಬಂಧಗಳ ಬಗ್ಗೆ ಅವಳಿಗಿರುವ ಗೌರವವೇ ಅವಳನ್ನು ತನ್ನ ವೃತ್ತಿಯಲ್ಲಿ ಹಿಂದುಳಿಯುವಂತೆ ಮಾಡಿದೆ ಅಂದರೂ ತಪ್ಪಾಗದು!. ಗಂಡ ಹೆಂಡತಿ ನಡುವೆ ಬಿರುಕು ಮೂಡಿ ವಿಚ್ಛೇದನ ಕೋರಿ ಬಂದ ಜೋಡಿಗಳ ನಡುವೆ ಸಾಮರಸ್ಯ ಮೂಡಿಸಿ ಅವರನ್ನು ಒಂದು ಮಾಡುವುದರಲ್ಲೇ ಅವಳಿಗೆ ಆಸಕ್ತಿ. ಹೀಗಿರುವಾಗ ಒಂದು ಮಹತ್ವದ ಕೇಸು ಎಲ್ಲವನ್ನೂ ತಲೆಕೆಳಗು ಮಾಡುತ್ತದೆ. ಮೋಸ್ಟ್ ಸಕ್ಸಸ್ ಫುಲ್ ಬ್ಯುಸಿನೆಸ್ ಮ್ಯಾನ್ ಸಾರ್ಥಕ್ ದಾಂಪತ್ಯದಲ್ಲಿ ಬಿರುಕುಂಟಾಗಿ, ಪತ್ನಿ ಪ್ರಿಯಾಂಕಾ ಡಿವೋರ್ಸ್ ಕೇಸ್ ಫೈಲ್ ಮಾಡಿದಾಗ ವಧು ಹತ್ತಿರ ಸಹಾಯ ಕೋರಿ ಬರುತ್ತಾನೆ. ಈ ವೇಳೆ ಕತೆ ಕುತೂಹಲಕರ ತಿರುವು ಪಡೆಯುತ್ತದೆ. ಎರಡೂ ಕತೆಗಳು ಆಧುನಿಕ ಬದುಕಿನ ಸಂಬಂಧಗಳ ಹೊಸ ಸಂಕೀರ್ಣತೆಯನ್ನು ಎಳೆಎಳೆಯಾಗಿ ಬಿಡಿಸಿಡುವ ಹೊಸ ಬಗೆಯ ಕತೆಗಳು. ಭಾವನೆಗಳ ಸಂಘರ್ಷವನ್ನು ಅದರ ಮಿತಿಗಳಾಚೆಗೆ ಜಗ್ಗಿ ಪರೀಕ್ಷಿಗೊಳಪಡಿಸುವ ಈ ಎರಡು ಕತೆಗಳು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗಾಜಾದಲ್ಲಿ 5 ರೂಪಾಯಿಯ ಪಾರ್ಲೆಜಿ ಬಿಸ್ಕತ್ ಬೆಲೆ 2,300 ರೂಪಾಯಿ !

ಗಾಜಾ ಪಟ್ಟಣದಲ್ಲಿ, ಆಹಾರ ಸೇರಿದಂತೆ ಮೂಲಭೂತ ಅಗತ್ಯ ವಸ್ತುಗಳ ಲಭ್ಯತೆ ಕುಸಿದಿದೆ. ಈ ಭೀಕರ ಪರಿಸ್ಥಿತಿಯಲ್ಲಿ, ಭಾರತೀಯ ಮಾರುಕಟ್ಟೆಯಲ್ಲಿ ಕೇವಲ ₹5ಕ್ಕೆ ಲಭ್ಯವಿರುವ ಪಾರ್ಲೆ-ಜಿ ಬಿಸ್ಕತ್ ಗಾಜಾದಲ್ಲಿ ₹2,300ಕ್ಕಿಂತಲೂ ಹೆಚ್ಚು ಬೆಲೆಗೆ ಮಾರಾಟವಾಗುತ್ತಿರುವ ವರದಿ ವೈರಲ್ ಆಗಿದೆ.

ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆಗೆ ಕೇಂದ್ರದಿಂದ ಪರವಾನಿಗೆ! ಸೆಟಲೈಟ್ ಇಂಟರ್ನೆಟ್ ಸೇವೆಗೆ ಮತ್ತೊಂದು ಹೆಜ್ಜೆ

ಅಮೆರಿಕದ ಆಂತರಿಕ್ಷ ತಂತ್ರಜ್ಞಾನ ಕ್ಷೇತ್ರದ ಅಗ್ರಗಣ್ಯ ಸಂಸ್ಥೆ ಸ್ಪೇಸ್ ಎಕ್ಸ್‌ಗೆ ಸೇರಿದ ಎಲಾನ್ ಮಸ್ಕ್ ಅವರ ಸ್ಟಾರ್ ಲಿಂಕ್ ಸಂಸ್ಥೆಗೆ ಭಾರತದಲ್ಲಿ ಸೆಟಲೈಟ್ ಕಮ್ಯೂನಿಕೇಶನ್ ಸೇವೆ ನೀಡಲು ದೂರಸಂಪರ್ಕ ಇಲಾಖೆಯಿಂದ (DoT) ಪರವಾನಿಗೆ ನೀಡಲಾಗಿದೆ ಎಂದು ಪಿಟಿಐ ವರದಿ ತಿಳಿಸಿದೆ.

ಒಂದು ಅನಾನಸಿನಲ್ಲಿ 13 ಗಿಡಗಳು! ಕಾರ್ಕಳದ ಮೆಜೆಸ್ಟಿಕ್ ಕ್ರಶರ್ ಕೈದೋಟದಲ್ಲಿ ಪ್ರಕೃತಿಯ ವಿಸ್ಮಯ

ಕಾರ್ಕಳದ ಗುಂಡ್ಯಡ್ಕದಲ್ಲಿರುವ ಮೆಜೆಸ್ಟಿಕ್ ಕ್ರಶರ್ ನ ಕೈದೋಟದಲ್ಲಿ ಕಂಡುಬಂದಿರುವ ಅನಾನಸು ಹಣ್ಣು ಇಲ್ಲಿನ ಎಲ್ಲರನ್ನೂ ಆಚ್ಚರಿಗೊಳಿಸಿದೆ.

ಯೋಗೇಶ್ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿಯ ಜಾಮೀನು ರದ್ದು ಪಡಿಸಿದ ಸುಪ್ರೀಂ ಕೋರ್ಟ್!

ಬಿಜೆಪಿ ಮುಖಂಡ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಶಾಸಕ ವಿನಯ್ ಕುಲಕರ್ಣಿಯ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ.