spot_img

ಹಿಂದೂ ಕಾರ್ಯಕರ್ತರ ಮಾನವ ಹಕ್ಕು ಉಲ್ಲಂಘನೆ ವಿರುದ್ಧ ಒಕ್ಕೂಟದ ಪ್ರತಿಭಟನೆ: ದ.ಕ. ಜಿಲ್ಲಾಧಿಕಾರಿಗೆ ಮನವಿ

Date:

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಪೊಲೀಸರು ಹಿಂದೂ ಸಂಘಟನೆಗಳ ಕಾರ್ಯಕರ್ತರಿಗೆ ನೀಡುತ್ತಿರುವ ಕಿರುಕುಳದ ವಿರುದ್ಧ ಹಲವಾರು ಹಿಂದೂ ಸಂಘಟನೆಗಳು ಧ್ವನಿ ಎತ್ತಿವೆ. ಹಿಂದೂ ಮುಖಂಡರೊಬ್ಬರ ಹತ್ಯೆಯ ಬಳಿಕ ಜಿಲ್ಲೆಯ ಶಾಂತಿ ಕಾಪಾಡುವ ಹೆಸರಿನಲ್ಲಿ ಪೊಲೀಸರು ನಿರ್ದಿಷ್ಟ ಸಮುದಾಯದ ಕಾರ್ಯಕರ್ತರಿಗೆ ಟಾರ್ಗೆಟ್ ಮಾಡಿರುವುದಾಗಿ ಸಂಘಟನೆಗಳು ಆರೋಪಿಸಿವೆ.

ಒಕ್ಕೂಟದ ಪ್ರಕಾರ, ನೂತನ ಎಸ್‌ಪಿ ನಿರ್ದೇಶನದಂತೆ ಹಿಂದೂ ಕಾರ್ಯಕರ್ತರನ್ನು ಮಧ್ಯರಾತ್ರಿ ದೂರವಾಣಿ ಮೂಲಕ ಕರೆ ಮಾಡಿ, ನೋಟಿಸ್ ನೀಡದೇ ವಿಚಾರಣೆಗೆ ಕರೆದು, ಅವರ ಮನೆಗೆ ಪೊಲೀಸರು ಹೋಗಿ ಫೋಟೋ ತೆಗೆಯುವುದು, ಜಿಪಿಎಸ್ ಲೊಕೇಶನ್ ದಾಖಲಿಸುವಂತಹ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದಲ್ಲದೆ, ಸಾಮಾಜಿಕ ಜಾಲತಾಣಗಳಲ್ಲಿ ಏನು ಬರೆದುಕೊಂಡರೂ ಪ್ರಕರಣ ದಾಖಲಿಸುವುದು, ಬಂಧಿಸುವುದು ಮತ್ತು ಅವರ ವ್ಯಕ್ತಿತ್ವಕ್ಕೆ ಧಕ್ಕೆ ಉಂಟು ಮಾಡುವ ಕೃತ್ಯಗಳು ನಡೆಯುತ್ತಿವೆ.

ಈ ಎಲ್ಲಾ ಘಟನೆಗಳು ಭಾರತ ಸಂವಿಧಾನದ ಕಲಂ 14 (ಸಮಾನತೆ ಹಕ್ಕು), 19 (ಅಭಿವ್ಯಕ್ತಿ ಸ್ವಾತಂತ್ರ್ಯ), ಮತ್ತು 21 (ಖಾಸಗಿ ಜೀವನದ ಹಕ್ಕು)ಗಳ ಉಲ್ಲಂಘನೆಯಾಗಿವೆ. ಹೀಗಾಗಿ, ಹಿಂದೂ ಸಂಘಟನೆಗಳ ಒಕ್ಕೂಟವು ಜೂನ್ 6ರಂದು ಜಿಲ್ಲಾ ಪೊಲೀಸ್ ಮಹಾನಿರೀಕ್ಷಕ ಅಮಿತ್ ಸಿಂಗ್ ಹಾಗೂ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಅವರ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು.

ಮನವಿಯಲ್ಲಿ ಹೈಲೈಟ್ ಮಾಡಲಾದ ಬೇಡಿಕೆಗಳು:

  1. ಮಾನವ ಹಕ್ಕು ಉಲ್ಲಂಘನೆಯ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯಬೇಕು.
  2. ಪೋಲಿಸರು ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಪ್ರಕಾರವೇ ನಡೆದುಕೊಳ್ಳಬೇಕು.
  3. ಹಿಂಸೆಗೆ ಒಳಗಾದ ಹಿರಿಯ ನಾಗರಿಕರಿಗೆ ಪರಿಹಾರ ನೀಡಬೇಕು ಹಾಗೂ ಕ್ಷಮಾಪಣೆ ಪಡೆಯಬೇಕು.
  4. ಮಾನಸಿಕ ಕಿರುಕುಳ ನೀಡಿದ ಪೊಲೀಸರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು.
  5. ಹಿಂದೂ ನಾಯಕರಿಗೆ ಬಂದಿರುವ ಜೀವ ಬೆದರಿಕೆಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಿ ರಕ್ಷಣೆ ಒದಗಿಸಬೇಕು.
  6. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಪಿಎಫ್‌ಐ ಸಂಚು ಕುರಿತು ಐಪಿಎಸ್ ಮಟ್ಟದ ತನಿಖೆ ಮಾಡಬೇಕು.
  7. ಕೋಮು ದ್ವೇಷ ಭಾಷಣ ಮಾಡಿದ ಎಸ್‌ಡಿಪಿಐ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕು.

ಉಪಸ್ಥಿತರಿದ್ದವರು:
ವಿದ್ಯಾಸರಸ್ವತಿ ಸ್ವಾಮೀಜಿ, ಭಾಸ್ಕರ್ ಚಂದ್ರ ಶೆಟ್ಟಿ, ಚಂದ್ರ ಮೊಗವೀರ, ಪ್ರಶಾಂತ್ ಶೆಟ್ಟಿ, ಆನಂದ್ ಶೆಟ್ಟಿ ಅಡ್ಯಾರ್, ಗಿರೀಶ್ ಕೊಟ್ಟಾರಿ, ಲೋಕೇಶ್ ಕುಲಾಲ್, ಜನಾರ್ಧನ ಅರ್ಕುಲ್, ಕೃಷ್ಣ ಉಪಾಧ್ಯಾಯ, ಅಮೃತೇಶ, ಈಶ್ವರ ಕೊಟ್ಟಾರಿ, ತೀರ್ಥೇಶ, ಕಿರಣ್ ರೈ, ತಿಲಕ್, ಗಣರಾಜ ಭಟ್ ಮೊದಲಾದವರು ಉಪಸ್ಥಿತರಿದ್ದರು.

ಈ ಹಿಂದೆ ನಡೆದ ಅಬ್ದುಲ್ ರೆಹಮಾನ್ ಶವಯಾತ್ರೆ ಸಂದರ್ಭದಲ್ಲಿ ಮಾಧ್ಯಮದ ಮೇಲೆ ನಡೆದ ಹಲ್ಲೆ, ಕಲ್ಲು ತೂರಾಟಕ್ಕೂ ಸಂಬಂಧಪಟ್ಟ ಆರೋಪಿಗಳ ವಿರುದ್ಧ ಕೂಡ ಕ್ರಮ ಕೈಗೊಳ್ಳಬೇಕು ಎಂಬುದನ್ನು ಒತ್ತಾಯಿಸಲಾಯಿತು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

‘ಸೇವಾ ಪಾಕ್ಷಿಕ ಅಭಿಯಾನ’ ಯಶಸ್ವಿಗೊಳಿಸಲು ಕುತ್ಯಾರು ನವೀನ್ ಶೆಟ್ಟಿ ಕರೆ

ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.

ಕ್ರಿಯೇಟಿವ್ ಕಾಲೇಜಿನಲ್ಲಿ ಗುರುದೇವೋಭವ ಕಾರ್ಯಕ್ರಮ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ, 'ಕ್ರಿಯೇಟಿವ್ ಗುರುದೇವೋಭವ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.

ಕಾರ್ಕಳ ಜ್ಞಾನಸುಧಾ – ಶಿಕ್ಷಕರ ದಿನಾಚರಣೆಸಾವಧಾನದ ಮನಸ್ಥಿತಿ ಗೌರವದ ಉಪಸ್ಥಿತಿ : ವಸಂತ್ ಆಚಾರ್

ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಂದರ್ಭ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದರು.

ಉಡುಪಿ ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ ರಿ. ಇದರ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮ

ಉಡುಪಿ ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ ರಿ. ಇದರ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮವು ಅಧ್ಯಕ್ಷರಾದ ಶ್ರೀಯುತ ಎಮ್ ಕೆ ದಿನೇಶ್ ಮೂಡಬಿದ್ರಿಯವರ ಅಧ್ಯಕ್ಷತೆಯಲ್ಲಿ ದೀಪ ಬೆಳಗಿಸುದರ ಮುಖೇನ ಉದ್ಯಾವರ ನಿತ್ಯಾನಂದ ಸಭಾಂಗಣದಲ್ಲಿ ನಡೆಯಿತು.