spot_img

ಕಾಂಗ್ರೆಸ್ ಬೂತ್ ಅಧ್ಯಕ್ಷರುಗಳಿಗೆ ಅಭಿನಂದನೆ ಮತ್ತು ಕಾರ್ಯಾಗಾರ

Date:

spot_img

ಕಾರ್ಕಳ ಬ್ಲಾಕ್ ವ್ಯಾಪ್ತಿಯ ನೂತನ ಬೂತ್ ಅಧ್ಯಕ್ಷರುಗಳಿಗೆ ಅಭಿನಂದನೆ ಮತ್ತು ಕಾರ್ಯಗಾರ ಆದಿತ್ಯವಾರ ಸಂಜೆ ಪ್ರಕಾಶ್ ಹೋಟೇಲ್ ನಲ್ಲಿ ಜರುಗಿತು.

ಕಾರ್ಕಳ ಬ್ಲಾಕ್ ನೂತನ 150 ಬೂತ್ ಅಧ್ಯಕ್ಷರುಗಳನ್ನು ಅಭಿನಂದಿಸಿ ಉದಯ್ ಶೆಟ್ಟಿ ಮಾತನಾಡಿ ಪಕ್ಷದ ಸಂಘಟನೆಯಲ್ಲಿ ಬೂತ್ ಅಧ್ಯಕ್ಷರ ಪಾತ್ರ ಅತೀ ಪ್ರಮುಖವಾದದ್ದು, ಬೂತ್ ಅಧ್ಯಕ್ಷರು ಸ್ಥಳೀಯ ಜನರ ಸಮಸ್ಯೆಗಳಿಗೆ ಧ್ವನಿಯಾಗಿ ಸೇವೆ ಸಲ್ಲಿಸಿದರೆ ಸಮಸ್ಯೆಗೆ ಪರಿಹಾರ ಸುಲಭ ಹಾಗೂ ಅದರ ಪರಿಣಾಮ ಪಕ್ಷ ಸಂಘಟನೆಗೆ ಪೂರಕವಾಗುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಬ್ಲಾಕ್ ಅಧ್ಯಕ್ಷ ಶುಭದರಾವ್ ಮಾತನಾಡಿ ಈ ದೇಶದ ಇತಿಹಾಸ ಮತ್ತು ಕಾಂಗ್ರೆಸ್ ಇತಿಹಾಸ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಅಂತಹ ಪಕ್ಷದ ಪದಾಧಿಕಾರಿಗಳಾಗಿರುವುದು ನಮ್ಮೆಲ್ಲರ ಪುಣ್ಯ, ಸಿಕ್ಕಿದ ಅವಕಾಶವನ್ನು ಸರಿಯಾಗಿ ಉಪಯೋಗಿಸಿಕೊಂಡು ಪಕ್ಷದ ಬಲವರ್ಧನೆಗೆ ಸಂಪೂರ್ಣ ತೊಡಗಿಸಿಕೊಳ್ಳುವಂತೆ ಸಲಹೆ ನೀಡಿದರು.

ಹಿರಿಯ ನ್ಯಾಯವಾದಿ ಶೇಖರ್ ಮಡಿವಾಳ್ ಮಾತನಾಡಿ ಕಾರ್ಕಳದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನಾ ಕಾರ್ಯಾವು ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವುದು ಸಂತಸ ತಂದಿದೆ, ಪಕ್ಷ ಸಂಘಟನೆಯಲ್ಲಿ ಯುವ ಕಾಂಗ್ರೆಸ್ ಪಾತ್ರ ಅತ್ಯಂತ ಮಹತ್ವದ್ದು ಹಾಗಾಗಿ ನೂತನವಾಗಿ ಆಯ್ಕೆಯಾದ ಎಲ್ಲಾ ಪದಾಧಿಕಾರಿಗಳು ಈ ಅಂಶವನ್ನು ಅರಿತುಕೊಂಡು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಉಪಸ್ಥಿತರಿದ್ದ ನಾಯಕರಿಂದ ಕಾಂಗ್ರೆಸ್ ಪಕ್ಷದ ಚಿಹ್ನೆಯುಳ್ಳ ಸಮವಸ್ತ್ರವನ್ನು ಬಿಡುಗಡೆಗೊಳಿಸಿ ಬೂತ್ ಅಧ್ಯಕ್ಷರಿಗೆ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ನೂತನ ಯುವ ಕಾಂಗ್ರೆಸ್ ಅಧ್ಯಕ್ಷರಾದ ಸೂರಜ್ ಶೆಟ್ಟಿ ನಕ್ರೆ, ಕಾರ್ಕಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಲಿಕ್ ಅತ್ತೂರು, ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ರಾಜೇಂದ್ರ ದೇವಾಡಿಗ, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ರೀನಾ ಡಿಸೋಜ, ಹಿಂದುಳಿದ ಘಟಕದ ಅಧ್ಯಕ್ಷ ಅನಿಲ್ ನೆಲ್ಲಿಗುಡ್ಡೆ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಬ್ಬೀರ್, ಕಾನೂನು ಘಟಕದ ಅಧ್ಯಕ್ಷ ರೆಹಮ್ಮತ್ತುಲ್ಲಾ ಉಪಸ್ಥಿತರಿದ್ದರು.

ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆಗಳ ಸಮಿತಿಯ ಅಧ್ಯಕ್ಷರಾದ ಅಜಿತ್ ಹೆಗ್ಡೆ ಮಾಳ ಪ್ರಾಸ್ತಾವಿಕ ಮಾತುಗಳನ್ನಾಡಿ ಅತಿಥಿಗಳನ್ನು ಸ್ವಾಗತಿಸಿದರು, ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಭಾನು ಭಾಸ್ಕರ್ ಪೂಜಾರಿ ವಂದನಾರ್ಪಣೆಗೈದರು, ವಕ್ತಾರ ಪ್ರದೀಪ್ ಬೇಲಾಡಿ ಕಾರ್ಯಕ್ರಮ ನಿರೂಪಣೆ ಮಾಡಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಉಪರಾಷ್ಟ್ರಪತಿ ಸ್ಥಾನಕ್ಕೆ ಕರ್ನಾಟಕ ಮೂಲದ ನ್ಯಾಯಮೂರ್ತಿ ಅಬ್ದುಲ್ ನಝೀರ್ ಹೆಸರು ಮುಂಚೂಣಿಯಲ್ಲಿ

ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ತಮ್ಮ ಸ್ಥಾನಕ್ಕೆ ಅನಿರೀಕ್ಷಿತವಾಗಿ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ, ಈ ಮಹೋನ್ನತ ಹುದ್ದೆಗೆ ಕರ್ನಾಟಕದ ಹೆಮ್ಮೆಯ ಪುತ್ರ, ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಸ್. ಅಬ್ದುಲ್ ನಝೀರ್ ಅವರ ಹೆಸರು ಪ್ರಬಲವಾಗಿ ಕೇಳಿಬರುತ್ತಿದೆ.

ಧರ್ಮಸ್ಥಳ ದುರಂತಗಳ ಆಳಕ್ಕೆ ಇಳಿಯಲು ಸಹಾಯವಾಣಿ ಸ್ಥಾಪನೆಗೆ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಶವ ವಿಲೇವಾರಿ ಪ್ರಕರಣವು ಇದೀಗ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಬೋಳದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಅಡ್ಡಿಪಡಿಸಿದ ಬಿಜೆಪಿ ಗ್ರಾ. ಪಂ ಸದಸ್ಯರ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

ಬಿಜೆಪಿ ಪಂಚಾಯತ್ ಸದಸ್ಯರ ದುರ್ನಡತೆಯ ವಿರುದ್ದ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಹಾಗೂ ಬೋಳ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಜಂಟಿ ಆಶ್ರಯದಲ್ಲಿ ಬೋಳ ಗ್ರಾಮ ಪಂಚಾಯತ್ ಕಚೇರಿ ಮುಂಬಾಗದಲ್ಲಿ ಪ್ರತಿಭಟನಾ ಸಭೆ ನಡೆಯಿತು.

ಎಂ.ಆರ್.ಐ. ಯಂತ್ರದಿಂದ ಲೋಹದ ಆಭರಣ ಧರಿಸಿದ ವ್ಯಕ್ತಿಯ ಸಾವು!

ವೈದ್ಯಕೀಯ ಜಗತ್ತಿನಲ್ಲಿ ಅಪರೂಪದ ಆದರೆ ಅತ್ಯಂತ ಗಂಭೀರವಾದ ದುರಂತವೊಂದು ಅಮೆರಿಕದ ನ್ಯೂಯಾರ್ಕ್‌ನಲ್ಲಿ ಸಂಭವಿಸಿದ್ದು, ಮ್ಯಾಗ್ನೆಟಿಕ್ ರೆಸೋನೆನ್ಸ್ ಇಮೇಜಿಂಗ್ (ಎಂ.ಆರ್.ಐ.) ಸ್ಕ್ಯಾನ್ ಯಂತ್ರದ ಪ್ರಬಲ ಕಾಂತೀಯ ಕ್ಷೇತ್ರಕ್ಕೆ ಸೆಳೆದುಕೊಂಡು ವ್ಯಕ್ತಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ