
ದೆಹಲಿ : ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯಿಂದ ಬಳಲುತ್ತಿದ್ದು, ಗ್ಯಾಸ್ಟೋಎಂಟರಾಲಜಿ ವಿಭಾಗದ ಆರೈಕೆಯಲ್ಲಿದ್ದಾರೆ ಎಂದು ತಿಳಿದುಬಂದಿದೆ.
ಈ ತಿಂಗಳಲ್ಲಿ ಅವರು ಎರಡನೇ ಬಾರಿ ಆಸ್ಪತ್ರೆಗೆ ದಾಖಲಾಗಿದ್ದು, ಈ ಹಿಂದೆ ಜೂನ್ 7ರಂದು ಸಹ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು.