
ಉಡುಪಿ: ಬಿಜೆಪಿಯ ‘ಸುಳ್ಳಿನ ಪ್ರತಿಭಟನೆ’ಗೆ ಪ್ರತಿಯಾಗಿ ಕಾಂಗ್ರೆಸ್ ಪಕ್ಷ ‘ಸತ್ಯದರ್ಶನ’ ಪ್ರತಿಭಟನೆ ನಡೆಸಿ, ರಾಜಕೀಯ ಸಮರಕ್ಕೆ ಇಳಿದಿದೆ. ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ನೇತೃತ್ವದಲ್ಲಿ ಮಂಗಳವಾರ ಅಂಬಲಪಾಡಿ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಈ ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು.
ಪ್ರತಿಭಟನೆಯಲ್ಲಿ ಮಾತನಾಡಿದ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ಹರೀಶ್ ಕಿಣಿ, “ಕಾಂಗ್ರೆಸ್ ಪಕ್ಷವು ಅಧಿಕಾರದಲ್ಲಿದ್ದ ಎಲ್ಲಾ ಸಂದರ್ಭಗಳಲ್ಲಿ ಹಲವಾರು ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಜನಸಾಮಾನ್ಯರ ಬಗ್ಗೆ ಕಾಳಜಿ ಹೊಂದಿರುವ ಕಾಂಗ್ರೆಸ್ ಪಕ್ಷವು ಯಾವುದೇ ಯೋಜನೆಗಳನ್ನು ನಿಲ್ಲಿಸುವುದಿಲ್ಲ” ಎಂದು ಸ್ಪಷ್ಟಪಡಿಸಿದರು. ಅಲ್ಲದೆ, “ಧಾರ್ಮಿಕ ವಿಚಾರಗಳನ್ನು ಕೆದಕಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವ ಬಿಜೆಪಿ, ಇನ್ನಾದರೂ ಜನಪರವಾಗಿ ಕಾರ್ಯ ನಿರ್ವಹಿಸಲಿ” ಎಂದು ಕಿಣಿ ಆಗ್ರಹಿಸಿದರು.
ಈ ಪ್ರತಿಭಟನಾ ಸಭೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಶೋಕ್ ಕೊಡವೂರು, ನಾಯಕರಾದ ಪ್ರಸಾದ್ ರಾಜ್ ಕಾಂಚನ್, ಉಡುಪಿ ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿಯ ಅಧ್ಯಕ್ಷರಾದ ಕೃಷ್ಣಮೂರ್ತಿ ಆಚಾರ್ಯ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಕೀರ್ತಿ ಶೆಟ್ಟಿ, ಮಹಾಬಲ ಕುಂದರ್, ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯ ಲಕ್ಷ್ಮಣ್ ಪೂಜಾರಿ, ಕಾಂಗ್ರೆಸ್ ಪಕ್ಷದ ನಾಯಕರಾದ ನರಸಿಂಹಮೂರ್ತಿ, ಅಣ್ಣಯ್ಯ ಶೇರಿಗಾರ್, ಐರಿನ್ ಅಂದ್ರಾದೆ, ಯುವರಾಜ್ ಪುತ್ತೂರು, ನಳಿನಾಕ್ಷಿ ಬಂಗೇರ, ಪ್ರಮೀಳಾ ಸುವರ್ಣ, ಆನಂದ್ ಪೂಜಾರಿ, ಜ್ಯೋತಿ ಕಪ್ಪೆಟ್ಟು, ದಯಾನಂದ್ ಮಾಸ್ಟರ್, ಉದಯ್ ಪಂದುಬೆಟ್ಟು, ದಿನೇಶ್ ಮೂಡುಬೆಟ್ಟು, ಸಾಯಿರಾಜ್ ಕೋಟ್ಯಾನ್, ಸದಾನಂದ್ ಕುಲಾಲ್, ಸುರೇಶ್ ಶೆಟ್ಟಿ, ಗಣೇಶ್ ನೆರ್ಗಿ, ಸಂಧ್ಯಾ ತಿಲಕ್‌ರಾಜ್, ಸತೀಶ್ ಕೊಡವೂರು, ಸತೀಶ್ ಮಂಚಿ, ಭರತ್, ಅರ್ಚನಾ, ಸುಪ್ರಿತಾ, ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಬೂತ್ ಸಮಿತಿಯ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.