spot_img

ಇಂಧನ ಬೆಲೆ ಏರಿಕೆ ಖಂಡಿಸಿ ಎ.26ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ

Date:

spot_img

ಮಂಗಳೂರು : ಕೇಂದ್ರ ಸರ್ಕಾರ ಇಂಧನ ಹಾಗೂ ಅಡುಗೆ ಅನಿಲದ ಬೆಲೆ ಏರಿಸಿರುವುದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಎಪ್ರಿಲ್ 26ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಸಾರ್ವಜನಿಕ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳವಾರ ಮಂಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, “ ಎಪ್ರಿಲ್ 26ರಂದು ಬೆಳಗ್ಗೆ 10 ಗಂಟೆಗೆ ಅಂಬೇಡ್ಕರ್ ವೃತ್ತದಿಂದ ಹಂಪನಕಟ್ಟೆ ಮಿನಿ ವಿಧಾನಸೌಧದವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಬಳಿಕ ಸಾರ್ವಜನಿಕ ಸಭೆ ನಡೆಯಲಿದ್ದು, ಎಐಸಿಸಿ ಕಾರ್ಯದರ್ಶಿ ರೋಜಿ ಎಂ. ಜಾನ್ ಅವರು ಪ್ರಧಾನ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ,” ಎಂದರು.

ಪ್ರತಿಭಟನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಜಿಲ್ಲಾ ಹಾಗೂ ರಾಜ್ಯದ ವಿವಿಧ ಕಾಂಗ್ರೆಸ್ ನಾಯಕರು ಭಾಗವಹಿಸಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಶಶಿಧರ ಹೆಗ್ಡೆ, ನವೀನ್ ಡಿ’ಸೋಜಾ, ಶುಭೋದಯ ಆಳ್ವ, ಶಾಹುಲ್ ಹಮೀದ್, ಟಿ.ಕೆ. ಸುಧೀರ್, ನೀರಜ್ ಪಾಲ್, ಸುಹಾನ್ ಆಳ್ವ ಮತ್ತಿತರರು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಅಯೋಧ್ಯೆಯಲ್ಲಿ ಶ್ರೀರಾಮನ ಭವ್ಯ ಮಂದಿರ ನಿರ್ಮಾಣ

ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ದಾಖಲಾದ ದಿನ ಆಗಸ್ಟ್ 5, 2020. ಈ ದಿನ ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ಭವ್ಯ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಶಂಕುಸ್ಥಾಪನೆ ನೆರವೇರಿಸಲಾಯಿತು

UPI ಕ್ರಾಂತಿ: ಪಿನ್ ನಮೂದು ಇಲ್ಲದೆ ಬಯೋಮೆಟ್ರಿಕ್ ಪಾವತಿ; NPCI ಸಿದ್ಧತೆ!

ದೇಶದಲ್ಲಿ ಡಿಜಿಟಲ್ ಪಾವತಿ ವ್ಯವಸ್ಥೆಯಲ್ಲಿ ಕ್ರಾಂತಿಯನ್ನುಂಟು ಮಾಡಿದ UPI, ಈಗ ಮತ್ತೊಂದು ದೊಡ್ಡ ಹೆಜ್ಜೆಗೆ ಸಿದ್ಧವಾಗಿದೆ.

ಚಾಮರಾಜನಗರದಲ್ಲಿ ದುರಂತ: ಹಣ್ಣು ಎಂದು ವಿಷದ ಕಾಯಿ ತಿಂದ 12 ಮಕ್ಕಳು ಆಸ್ಪತ್ರೆಗೆ ದಾಖಲು!

ಯಳಂದೂರು ತಾಲ್ಲೂಕಿನ ಯರಿಯೂರು ಗ್ರಾಮದಲ್ಲಿ ಹಣ್ಣು ಎಂದು ತಿಳಿದು ವಿಷದ ಕಾಯಿ ತಿಂದಿದ್ದರಿಂದ 12 ಮಕ್ಕಳು ಅಸ್ವಸ್ಥಗೊಂಡ ಘಟನೆ ನಡೆದಿದೆ.

ಸೌದಿ ಅರೇಬಿಯಾದಲ್ಲಿ ಒಂದೇ ದಿನ 8 ಜನರಿಗೆ ಮರಣದಂಡನೆ

ಸೌದಿ ಅರೇಬಿಯಾದಲ್ಲಿ ಶನಿವಾರ ಒಂದೇ ದಿನ 8 ಮಂದಿಗೆ ಮರಣದಂಡನೆ ವಿಧಿಸಲಾಗಿದ್ದು, ಇದು ದೇಶದ ಇತಿಹಾಸದಲ್ಲೇ ಒಂದೇ ದಿನದಲ್ಲಿ ನೀಡಿದ ಅತಿ ಹೆಚ್ಚು ಶಿಕ್ಷೆಯಾಗಿದೆ.