ಧರ್ಮಸ್ಥಳದ ನಂಬಿಕೆಗಳ ವಿರುದ್ಧ ಷಡ್ಯಂತ್ರ: ದೇಶದ ಒಳ-ಹೊರಗಿನ ಶಕ್ತಿಗಳ ವಿರುದ್ಧ ನಳಿನ್ ಕುಮಾರ್ ಕಟೀಲ್ ಕಿಡಿ!

Date:

spot_img
Nalin-Kumar-Kateel

ಧರ್ಮಸ್ಥಳ: ಧರ್ಮ ಮತ್ತು ದೇವರ ವಿಷಯದಲ್ಲಿ ಜನರ ನಂಬಿಕೆಗಳಿಗೆ ಘಾಸಿ ಮಾಡುವ ಷಡ್ಯಂತ್ರವನ್ನು ದೇಶದ ಒಳಗೆ ಹಾಗೂ ಹೊರಗಿನ ಕೆಲವು ಶಕ್ತಿಗಳು ನಡೆಸುತ್ತಿವೆ ಎಂದು ಮಾಜಿ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತೀವ್ರವಾಗಿ ಟೀಕಿಸಿದ್ದಾರೆ. ಈ ಕುರಿತು ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ತಮ್ಮ ಪೋಸ್ಟ್‌ನಲ್ಲಿ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಮತ್ತು ಶ್ರೀ ಅಣ್ಣಪ್ಪ ಸ್ವಾಮಿಯ ಆಶೀರ್ವಾದದಿಂದ ಹಲವು ಕುಟುಂಬಗಳು ಏಳಿಗೆ ಕಂಡಿವೆ. ಆದರೆ, ಕೆಲ ಶಕ್ತಿಗಳು ನಮ್ಮ ನಂಬಿಕೆಯ ಗೋಡೆ ಶಿಥಿಲಗೊಳ್ಳಬೇಕು ಮತ್ತು ನಾವು ಸಾನಿಧ್ಯದಿಂದ ವಿಮುಖರಾಗಬೇಕು ಎಂದು ಬಯಸುತ್ತಿವೆ. ಇಂತಹವರಿಗೆ ನ್ಯಾಯ ಮತ್ತು ಸತ್ಯ ಮುಖ್ಯವಲ್ಲ ಎಂದು ಕಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನಮ್ಮ ವಿಶ್ವಾಸದ ಬುನಾದಿಯನ್ನು ಸಡಿಲಿಸಿ ಷಡ್ಯಂತ್ರಗಾರರು ಯಶಸ್ವಿಯಾಗುವುದಕ್ಕೆ ನಾವು ಬಿಡಬಾರದು,” ಎಂದು ಕಟೀಲ್ ಕರೆ ನೀಡಿದ್ದಾರೆ. ಅಲ್ಲದೆ, “ದೈವ-ದೇವರುಗಳ ಆಶೀರ್ವಾದ ಧರ್ಮ ರಕ್ಷಕರ ಮೇಲೆ ಸದಾ ಇರಲಿದೆ,” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಹೇಳಿಕೆಯು ಪ್ರಸ್ತುತ ಧರ್ಮಸ್ಥಳದ ಸುತ್ತಲಿನ ವಿವಾದಗಳ ಹಿನ್ನೆಲೆಯಲ್ಲಿ ಮಹತ್ವ ಪಡೆದುಕೊಂಡಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ನೀಟ್ ಹಗರಣ: ಸೋನಂ ವಾಂಗ್ಚುಕ್ ಉಪವಾಸ ಅಂತ್ಯಕ್ಕೆ 3 ಷರತ್ತು

ನೀಟ್ ಪತ್ರಿಕೆ ಸೋರಿಕೆ ಖಂಡಿಸಿ ಉಪವಾಸ ನಿರತರಾಗಿರುವ ಸೋನಂ ವಾಂಗ್ಚುಕ್ ಸತ್ಯಾಗ್ರಹ ಅಂತ್ಯಗೊಳಿಸಲು 3 ಪ್ರಮುಖ ಷರತ್ತು ವಿಧಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಆತ್ರಾಡಿ ಶಾಂಭವಿ ಹೋಟೆಲ್ ಆಟಿ ಆಹಾರ ಉತ್ಸವ

ಉಡುಪಿಯ ಶಾಂಭವಿ ಹೋಟೆಲ್‌ನಲ್ಲಿ ಜುಲೈ 24 ರಿಂದ ಸಾಂಪ್ರದಾಯಿಕ 'ಆಟಿ ದ ಒಂಜಿ ಊಟ' ಆಹಾರ ಉತ್ಸವ ಆರಂಭವಾಗಲಿದ್ದು, ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.