
ಮಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೀಡಿದ ಸಂವಿಧಾನ ತಿದ್ದುಪಡಿ ಕುರಿತು ರಾಜ್ಯ ಎಸ್‌ಸಿ ಮೋರ್ಚಾ ಉಪಾಧ್ಯಕ್ಷ ದಿನಕರ್ ಬಾಬು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಮುಸ್ಲಿಮರ ಓಲೈಕೆಗಾಗಿ ಸಂವಿಧಾನದ ಮೂಲ ಅಡಿಪಾಯವನ್ನೇ ಬದಲಾಯಿಸಲು ಕಾಂಗ್ರೆಸ್ ಹೊರಟಿದೆ. ಇದು ಅಂಬೇಡ್ಕರ್ ಅವರ ಪರಿಕಲ್ಪನೆಗೆ ವಿರುದ್ಧ” ಎಂದು ಅವರು ಹೇಳಿದ್ದಾರೆ.
“ಭಾರತದ ಸಂವಿಧಾನ ಎದೆಗುಂದಿಸಲು ಬಿಜೆಪಿ ಅವಕಾಶ ನೀಡುವುದಿಲ್ಲ” ಎಂದು ಹೇಳಿರುವ ದಿನಕರ್ ಬಾಬು, ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯನ್ನು ಗಂಭೀರ ಹಾಗೂ ಆತಂಕಕಾರಿ ಬೆಳವಣಿಗೆ ಎಂದು ಖಂಡಿಸಿದ್ದಾರೆ.