spot_img

ಪಾಗಲ್ ಪ್ರೇಮಿಯಿಂದ ಪ್ರೇಯಸಿಯ ಹತ್ಯೆ, ಬಳಿಕ ತಾನೂ ಆತ್ಮಹತ್ಯೆಗೆ ಶರಣು !

Date:

ಬೆಳಗಾವಿ: ಪ್ರೇಮ ಸಂಬಂಧಕ್ಕೆ ಕುಟುಂಬಸ್ಥರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಪ್ರೇಮಿಯೊಬ್ಬನು ತನ್ನ ಪ್ರೇಯಸಿಯ ಕತ್ತು ಸೀಳಿ ಹತ್ಯೆ ಮಾಡಿದ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಮಾರ್ಚ್ 4 ರಂದು ಬೆಳಗಾವಿ ಜಿಲ್ಲೆಯ ಶಹಾಪುರದ ನವಿಗಲ್ಲಿಯಲ್ಲಿ ನಡೆದಿದೆ.

ಮೃತ ಯುವತಿಯನ್ನು ಐಶ್ವರ್ಯಾ ಮಹೇಶ್ ಲೋಹಾರ (18) ಎಂದು ಗುರುತಿಸಲಾಗಿದ್ದು, ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಯನ್ನು ಪ್ರಶಾಂತ್ ಯಲ್ಲಪ್ಪ ಕುಂಡೇಕರ (29) ಎಂದು ಗುರುತಿಸಲಾಗಿದೆ. ಈ ಇಬ್ಬರೂ ಪ್ರೀತಿಯಲ್ಲಿ ಇದ್ದರೂ, ಕುಟುಂಬಸ್ಥರಿಂದ ಅದಕ್ಕೆ ಒಪ್ಪಿಗೆ ಇರಲಿಲ್ಲ ಎನ್ನಲಾಗಿದೆ.

ಪ್ರಶಾಂತ್ ಮತ್ತು ಐಶ್ವರ್ಯಾ ಇಬ್ಬರೂ ಐಶ್ವರ್ಯಾಳ ಚಿಕ್ಕಮ್ಮನ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದರು. ಆದರೆ, ಆ ಸಮಯದಲ್ಲಿ ಪ್ರಶಾಂತ್ ಚಾಕುವಿನಿಂದ ಐಶ್ವರ್ಯಾಳ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಬಳಿಕ, ಅದೇ ಚಾಕುವಿನಿಂದ ತನ್ನ ಕತ್ತು ಸೀಳಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ವಿಷಯ ತಿಳಿಯುತ್ತಿದ್ದಂತೆಯೇ ಶಹಾಪುರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ, ಇವರಿಬ್ಬರ ಸಂಬಂಧಕ್ಕೆ ಕುಟುಂಬಸ್ಥರು ವಿರೋಧಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.ಈ ಕುರಿತು ಶಹಾಪುರ ಠಾಣೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬೇಸಿಗೆಯಲ್ಲಿ ವಾಲ್ನಟ್ ಸೇವಿಸುವುದರ ಪ್ರಯೋಜನಗಳು!

ಬೇಸಿಗೆಯಲ್ಲಿ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ನೀರಿನಾಂಶದಿಂದ ಕೂಡಿದ ಹಣ್ಣುಗಳು ಮತ್ತು ತರಕಾರಿಗಳಷ್ಟೇ ಪ್ರಾಮುಖ್ಯತೆ ಡ್ರೈ ಫ್ರೂಟ್ಸ್‌ಗೂ ಇದೆ

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ನಿಷೇಧ: ವಿದ್ಯಾರ್ಥಿಗಳಿಗೆ ಅವಮಾನ, ನ್ಯಾಯಾಲಯದ ಮುಂದೆ ಪ್ರಕರಣ

ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ಯಜ್ಞೋಪವೀತ (ಜನಿವಾರ) ಧರಿಸಿದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ ಪ್ರಕರಣಗಳು ರಾಜ್ಯವ್ಯಾಪಿ ವಿವಾದವಾಗಿ ಪರಿಣಮಿಸಿದೆ.

ಸುಪ್ರೀಂಕೋರ್ಟ್ ಕಾನೂನು ರಚಿಸಿದರೆ ಸಂಸತ್ತಿನ ಅಗತ್ಯವೇನು? – ಬಿಜೆಪಿ ಸಂಸದ ನಿಶಿಕಾಂತ್ ದುಬೆಯ ವಿವಾದಾತ್ಮಕ ಹೇಳಿಕೆ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ನಿಶಿಕಾಂತ್ ದುಬೆ ಅವರು ಸುಪ್ರೀಂಕೋರ್ಟ್ ಕಾನೂನು ರಚನೆಯಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಿದರೆ ಸಂಸತ್ತನ್ನು ಮುಚ್ಚಿಬಿಡಬೇಕು ಎಂದು ವಾದಿಸಿದ್ದಾರೆ

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ವಿಚಿತ್ರ ವಿನಂತಿ: “ಪಾಸ್ ಮಾಡಿ ಸರ್, ನನ್ನ LOVE ನಿಮ್ಮ ಕೈಯಲ್ಲಿ!”

ಸ್ಎಸ್ಎಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆ ಮೌಲ್ಯಮಾಪನದ ಸಂದರ್ಭದಲ್ಲಿ ಒಂದು ವಿಚಿತ್ರ ಘಟನೆ ಬೆಳಗಾವಿಯ ಚಿಕ್ಕೋಡಿಯಲ್ಲಿ ನಡೆದಿದೆ.