spot_img

ಕ್ರಿಯೇಟಿವ್ ಪಿ. ಯು ಕಾಲೇಜಿನಲ್ಲಿ 2024-2025ನೇ ಸಾಲಿನ N.S.S ಕಾರ್ಯಚಟುವಟಿಕೆಗಳ ಸಮಾರೋಪ ಸಮಾರಂಭ

Date:

spot_img

ದಿನಾಂಕ 26/04/2025 ಶನಿವಾರದಂದು N.S.S ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ ನಡೆಯಿತು. ಸಭೆಯನ್ನುದ್ದೇಶಿಸಿ ಸಂಸ್ಥಾಪಕರಲ್ಲಿ ಓರ್ವರಾದ ಡಾ. ಗಣನಾಥ ಶೆಟ್ಟಿ, ಬಿ. ಮಾತನಾಡುತ್ತ N.S.S ಜೀವನ ಪಾಠವನ್ನು ಕಲಿಸುತ್ತದೆ. ಈ ಅನುಭವ ಜೀವನದುದ್ದಕ್ಕೂ ಸಹಕಾರಿಯಾಗುತ್ತದೆ ಎಂದರು.

ಇನ್ನೋರ್ವ ಸಂಸ್ಥಾಪಕರಾದ ಅಶ್ವತ್.ಎಸ್.ಎಲ್. N.S.S. ನ ವಿಶೇಷ ಶಿಬಿರಗಳು ಹಾಗೂ ಇತರೆ ಸಮಾಜಮುಖಿ ಸೇವೆಗಳು ನಮ್ಮನ್ನು ಶ್ರೇಷ್ಠ ವ್ಯಕ್ತಿಗಳಾಗಿ ರೂಪಿಸಬಲ್ಲದು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥಾಪಕರಲ್ಲಿ ಓರ್ವರು ಹಾಗೂ ಪ್ರಾಂಶುಪಾಲರೂ ಆದ ವಿದ್ವಾನ್ ಗಣಪತಿ ಭಟ್ ಮಾತನಾಡುತ್ತ ಸೇವಾ ಮನೋಭಾವ ಶ್ರೇಷ್ಠವಾದುದ್ದು, ಈ ವ್ಯಕ್ತಿತ್ವ ಬದುಕಿನುದ್ದಕ್ಕೂ ಸಹಕಾರಿ ಎಂದರು.

ಕಾರ್ಯಕ್ರಮದಲ್ಲಿ N.S.S ಚಟುವಟಿಕೆಗಳಲ್ಲಿ ಸಾಧನೆಗೈದ ಸ್ವಯಂ ಸೇವಕರಿಗೆ ಫಲಕ ನೀಡಿ ಗೌರವಿಸಲಾಯಿತು.

ಸಭೆಯಲ್ಲಿ ಸಂಯೋಜನಾಧಿಕಾರಿ ಉಮೇಶ್‌, ಉಪನ್ಯಾಸಕರಾದ ರಾಘವೇಂದ್ರ ಬಿ. ರಾವ್, ಚಂದ್ರಕಾಂತ ಹಾಗೂ ಬೋಧಕೇತರು ಹಾಗೂ N.S.S ಸ್ವಯಂ ಸೇವಕರು ಉಪಸ್ಥಿತರಿದ್ದರು.

ವಿದ್ಯಾರ್ಥಿನಿಯರಾದ ಅಧ್ಯ ಪಡ್ರೆ ಕಾರ್ಯಕ್ರಮ ನಿರೂಪಿಸಿ, ಕುಮಾರಿ ಹಿತ ವಂದಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಆರೋಗ್ಯಕ್ಕೆ ಮಾರಕವಾಗಬಲ್ಲ ದಿನನಿತ್ಯದ ಸೊಪ್ಪು: ಕಿಡ್ನಿ ಕಲ್ಲುಗಳ ಸೃಷ್ಟಿಗೆ ಪ್ರಮುಖ ಕಾರಣ!

ನಮ್ಮ ದೇಹದ ಅತ್ಯಂತ ಪ್ರಮುಖ ಅಂಗಗಳಲ್ಲಿ ಒಂದಾದ ಮೂತ್ರಪಿಂಡಗಳು, ರಕ್ತವನ್ನು ಶುದ್ಧೀಕರಿಸಿ ವಿಷಕಾರಿ ಅಂಶಗಳನ್ನು ಹೊರಹಾಕುವ ಕಾರ್ಯವನ್ನು ನಿರಂತರವಾಗಿ ಮಾಡುತ್ತವೆ.

“ಸು ಫ್ರಮ್‌ ಸೋ” ಅಬ್ಬರ: ಸಣ್ಣ ಬಜೆಟ್, ದೊಡ್ಡ ಕಲೆಕ್ಷನ್ – ಇದು ಕಂಟೆಂಟ್ ತಾಕತ್ತು!

ಇತ್ತೀಚೆಗೆ ತೆರೆ ಬಿದ್ದಿದ್ದು, ಜೆ.ಪಿ. ತುಮಿನಾಡ್ ನಿರ್ದೇಶನದ "ಸು ಫ್ರಮ್‌ ಸೋ" ಚಿತ್ರವು ಅದ್ಭುತ ಗೆಲುವು ಸಾಧಿಸಿದೆ. ರಾಜ್ ಬಿ ಶೆಟ್ಟಿ ಅವರ ಲೈಟರ್ ಬುದ್ಧ ಫಿಲಂಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿರುವ ಈ ಚಲನಚಿತ್ರವು, ಕಥಾವಸ್ತು ಮತ್ತು ನಿರೂಪಣೆಯ ಶಕ್ತಿಗೆ ಪ್ರೇಕ್ಷಕರು ಹೇಗೆ ಸ್ಪಂದಿಸುತ್ತಾರೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.

ಉಡುಪಿಯಲ್ಲಿ ವರುಣನ ಆರ್ಭಟ: ಆಸ್ತಿಪಾಸ್ತಿಗೆ ಹಾನಿ

ಕರಾವಳಿ ಜಿಲ್ಲೆ ಉಡುಪಿಯಲ್ಲಿ ಕಳೆದ 24 ಗಂಟೆಗಳಿಂದ ಬಿಡದೇ ಸುರಿಯುತ್ತಿರುವ ಭಾರೀ ಗಾಳಿ ಮತ್ತು ಮಳೆಯು ವ್ಯಾಪಕ ಅವಾಂತರಗಳನ್ನು ಸೃಷ್ಟಿಸಿದ್ದು, ಜಿಲ್ಲೆಯ ಬಹುತೇಕ ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ

ಹರಿದ್ವಾರದಲ್ಲಿ ದುರಂತ: ಮಾನಸಾ ದೇವಿ ದೇವಾಲಯದಲ್ಲಿ ಕಾಲ್ತುಳಿತ, 7 ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಪುಣ್ಯಕ್ಷೇತ್ರ ಹರಿದ್ವಾರದಲ್ಲಿರುವ ಪ್ರಸಿದ್ಧ ಮಾನಸಾ ದೇವಿ ದೇವಾಲಯದಲ್ಲಿ ಭಾನುವಾರ (ಜುಲೈ 27) ಸಂಭವಿಸಿದ ದುರದೃಷ್ಟಕರ ಕಾಲ್ತುಳಿತದಲ್ಲಿ ಏಳು ಭಕ್ತರು ಪ್ರಾಣ ಕಳೆದುಕೊಂಡಿದ್ದು, 28ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ