ಗ್ರಾಮ ಸಹಾಯಕರಿಗೆ ಸಿಕ್ಕಿತು ‘ಸೈಕಲ್ ಭಾಗ್ಯ’: ಹೆಬ್ರಿ ಪಂಚಾಯತ್ ಸದಸ್ಯರಿಂದ ಮಾದರಿ ಕಾರ್ಯ

Date:

spot_img

ಹೆಬ್ರಿ: ಗ್ರಾಮ ಸಹಾಯಕರಿಗೆ ಸೂಕ್ತ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಹೆಬ್ರಿ ಗ್ರಾಮ ಪಂಚಾಯತ್ ಸದಸ್ಯರು ಮಾದರಿ ಕಾರ್ಯ ಮಾಡಿದ್ದಾರೆ. ಹೆಬ್ರಿ ಗ್ರಾಮ ಸಹಾಯಕನಾಗಿ ಕಾರ್ಯನಿರ್ವಹಿಸುತ್ತಿರುವ ವಿಜಯ್ ಅವರಿಗೆ, ಪಂಚಾಯತ್‌ನ ವಾರ್ಡ್ 3 ರ ಸದಸ್ಯರಾದ ಜನಾರ್ಧನ್ ಎಚ್ ಮತ್ತು ಸಂತೋಷ್ ನಾಯಕ್ ರವರ ಮುತುವರ್ಜಿಯಲ್ಲಿ ಬೈಸಿಕಲ್ ಕೊಡಿಸಿ ನೆರವಾಗಿದ್ದಾರೆ.

ಸಭಾ ಭತ್ಯೆಯಿಂದ ಸಹಾಯ

ಸದಸ್ಯರಾದ ಜನಾರ್ಧನ್ ಮತ್ತು ಸಂತೋಷ್ ನಾಯಕ್ ಅವರು ತಮ್ಮ ಸಭಾ ಭತ್ಯೆಯ ಗೌರವಧನದಿಂದ ಹಣವನ್ನು ಸಂಗ್ರಹಿಸಿ, ಈ ಸೈಕಲ್‌ ಅನ್ನು ಕೊಡಿಸಿರುವುದು ವಿಶೇಷವಾಗಿದೆ. ಗ್ರಾಮೀಣ ಭಾಗದ ತಳ ಮಟ್ಟದಲ್ಲಿ ವಿವಿಧ ಕೆಲಸಗಳನ್ನು ನಿರ್ವಹಿಸುವ ಗ್ರಾಮ ಸಹಾಯಕರಿಗೆ ನೀಡಿದ ಈ ಸಹಾಯವು ಸಾರ್ವಜನಿಕರ ಮೆಚ್ಚುಗೆ ಮತ್ತು ಪ್ರಶಂಸೆಗೆ ಪಾತ್ರವಾಗಿದೆ.

ಸೈಕಲ್ ಹಸ್ತಾಂತರ ಕಾರ್ಯಕ್ರಮದಲ್ಲಿ ಧಾರ್ಮಿಕ ಮುಂದಾಳು ಎಚ್. ಭಾಸ್ಕರ ಜೋಯಿಸ್, ಹಿರಿಯ ಸಹಕಾರಿ ಎಚ್. ಕೆ. ನಾರಾಯಣ್ ನಾಯ್ಕ್ ಮತ್ತು ಉದ್ಯಮಿ ಪ್ರಕಾಶ್ ಮಲ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.