
ಉಡುಪಿ: ಕನ್ನರ್ಪಾಡಿ-ಕಿನ್ನಿಮೂಲ್ಕಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯು ಆಯೋಜಿಸಿರುವ 20ನೇ ವರ್ಷದ ಗಣೇಶೋತ್ಸವ ಸಂಭ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು (ಆ. 30, ಶನಿವಾರ) ಭಾಗವಹಿಸಲಿದ್ದಾರೆ. ಸಂಜೆ 6.30ಕ್ಕೆ ನಡೆಯಲಿರುವ ಧಾರ್ಮಿಕ ಸಭೆಯಲ್ಲಿ ಅವರು ಪ್ರಧಾನ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.
ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಕೆ. ಕೃಷ್ಣಮೂರ್ತಿ ಆಚಾರ್ಯ ಅವರು ಮಾಧ್ಯಮಗಳಿಗೆ ಈ ವಿಷಯ ತಿಳಿಸಿದ್ದಾರೆ. ಶಿವಕುಮಾರ್ ಅವರು ಸಭೆಯಲ್ಲಿ ಭಾಗವಹಿಸಿದ ಬಳಿಕ, ಸಮೀಪದಲ್ಲಿರುವ ಪ್ರಸಿದ್ಧ ಕನ್ನರ್ಪಾಡಿ ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.