
ಕಣ್ಣೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಬಿಡುಗಡೆಗೊಂಡಿರುವ ನಟ ದರ್ಶನ್, ತಮ್ಮ ಕುಟುಂಬದೊಂದಿಗೆ ಮಾರ್ಚ್ 22 ಶನಿವಾರ ಕೇರಳದ ಕಣ್ಣೂರಿನ ಮಾಡಾಯಿಕಾವು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ಈ ಸಂದರ್ಭ ಪತ್ನಿ ವಿಜಯಲಕ್ಷ್ಮಿ, ಮಗ ವಿನೀಶ್ ಹಾಗೂ ನಟ ಧನ್ವಿಯೊಂದಿಗೆ ದರ್ಶನ್ ಆಗಮಿಸಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು ಎಂದು ವರದಿಯಾಗಿದೆ.
ಇತ್ತೀಚೆಗೆ ದರ್ಶನ್ ಮೈಸೂರಿನಲ್ಲಿ ‘ಡೆವಿಲ್’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು.