ದಾವಣಗೆರೆಯಲ್ಲಿ ಪ್ರಿಯಕರನ ಜತೆ ಓಡಿಹೋದ ಪತ್ನಿ ; ಮನ ನೊಂದು ನೇಣಿಗೆ ಶರಣಾದ ಪತಿ-ಸೋದರ ಮಾವ

Date:

spot_img

ದಾವಣಗೆರೆ: ವಿವಾಹವಾದ ಕೇವಲ 2 ತಿಂಗಳಲ್ಲೇ ಪತ್ನಿಯ ಅನೈತಿಕ ಸಂಬಂಧ ಮತ್ತು ಆಕೆಯ ವರ್ತನೆಯಿಂದ ಮನನೊಂದ ಪತಿ ಹಾಗೂ ಆಕೆಯ ಸೋದರ ಮಾವ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ದಾವಣಗೆರೆಯಲ್ಲಿ ಸಂಭವಿಸಿದೆ.

ದಾವಣಗೆರೆ ತಾಲೂಕಿನ ಗುಮ್ಮನೂರು ಗ್ರಾಮದ ನಿವಾಸಿ ಹರೀಶ್ (32) ಮೃತಪಟ್ಟ ಪತಿ. ಹರೀಶ್ ಮತ್ತು ಸರಸ್ವತಿ ಎಂಬುವವರ ವಿವಾಹವು 2 ತಿಂಗಳ ಹಿಂದೆಯಷ್ಟೇ ಅದ್ಧೂರಿಯಾಗಿ ನೆರವೇರಿತ್ತು. ಈ ಮದುವೆಯನ್ನು ಸರಸ್ವತಿಯ ಸೋದರ ಮಾವ ರುದ್ರೇಶ್ ಅವರೇ ಮುಂದೆ ನಿಂತು ಮಾಡಿಸಿದ್ದರು. ಆರಂಭದಲ್ಲಿ ಸುಖವಾಗಿದ್ದ ದಾಂಪತ್ಯದಲ್ಲಿ ಬಿರುಗಾಳಿ ಎದ್ದಿದ್ದು, ನಾಲ್ಕು ದಿನಗಳ ಹಿಂದೆ ದೇವಸ್ಥಾನಕ್ಕೆ ಹೋಗುವುದಾಗಿ ಹೇಳಿದ ಸರಸ್ವತಿ ತನ್ನ ಪ್ರಿಯಕರನೊಂದಿಗೆ ಪರಾರಿಯಾಗಿದ್ದಳು.

ಇಷ್ಟಕ್ಕೇ ನಿಲ್ಲದ ಸರಸ್ವತಿ, ಪತಿ ಮತ್ತು ಅವರ ಕುಟುಂಬದ ವಿರುದ್ಧವೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಇದರಿಂದ ತೀವ್ರವಾಗಿ ನೊಂದ ಹರೀಶ್, “ಆಸ್ತಿಗಿಂತ ಮರ್ಯಾದೆ ಮುಖ್ಯ, ಪತ್ನಿ ಮತ್ತು ಆಕೆಯ ಕಡೆಯವರಿಂದ ಜೀವ ಬೆದರಿಕೆ ಇದೆ” ಎಂದು ಡೆತ್‌ನೋಟ್ ಬರೆದಿಟ್ಟು ಜಮೀನಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹರೀಶ್ ಸಾವಿನ ಸುದ್ದಿ ಕೇಳಿದ ಸೋದರ ಮಾವ ರುದ್ರೇಶ್, ತಾವು ಮುಂದೆ ನಿಂತು ಮಾಡಿಸಿದ ಮದುವೆಯಿಂದ ಇಷ್ಟೆಲ್ಲಾ ಅನಾಹುತವಾಯಿತಲ್ಲ ಎಂಬ ನೋವಿನಿಂದ ಆನೆಕೊಂಡದಲ್ಲಿ ನೇಣಿಗೆ ಶರಣಾಗಿದ್ದಾರೆ. ದಾವಣಗೆರೆ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ವಿಪ್ರ ಸ್ವಉದ್ಯಮ ಯೋಜನೆ: 2 ಲಕ್ಷ ಸಾಲಕ್ಕೆ ಅರ್ಜಿ ಆಹ್ವಾನ!

ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಸ್ವಉದ್ಯೋಗಕ್ಕೆ ಬಡ್ಡಿ ರಹಿತ/ಕಡಿಮೆ ಬಡ್ಡಿಯಲ್ಲಿ ಸಾಲ ಸೌಲಭ್ಯ. ಅರ್ಜಿ ಸಲ್ಲಿಸಲು 31-08-2026 ಕೊನೆ ದಿನ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬೆಂಗಳೂರು ಇಡಿ ದಾಳಿ: ಐಸಿಸ್ ಫಂಡಿಂಗ್ ಆರೋಪದ ಮೇಲೆ 8 ಕಡೆ ಶೋಧ

ಬೆಂಗಳೂರಿನಲ್ಲಿ ಐಸಿಸ್ ಉಗ್ರ ಸಂಘಟನೆಗೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಇಡಿ ಅಧಿಕಾರಿಗಳು 8 ಕಡೆ ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕರ್ನೂಲು ಬಳಿ ಭೀಕರ ಕಾರು ಅಪಘಾತ: ರವಿಚಂದ್ರ ಶೆಟ್ಟಿ ದುರ್ಮರಣ

ಆಂಧ್ರದ ಕರ್ನೂಲು ಬಳಿ ನಡೆದ ಕಾರು ಅಪಘಾತದಲ್ಲಿ ಮಂಗಳೂರಿನ ರವಿಚಂದ್ರ ಶೆಟ್ಟಿ ನಿಧನರಾಗಿದ್ದಾರೆ. ಮೂವರಿಗೆ ಗಾಯಗಳಾಗಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.