“ಕಾನೂನು ಸುವ್ಯವಸ್ಥೆ ಕದಡಿದರೆ ಡಿಸಿ, ಎಸ್ಪಿಗಳು ನೇರ ಹೊಣೆಗಾರರು”— ಸಿಎಂ ಸಿದ್ದರಾಮಯ್ಯ

Date:

spot_img

ಬೆಂಗಳೂರು: ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಡುವ ಯಾವುದೇ ಯತ್ನವನ್ನು ಸರ್ಕಾರ ಸಹಿಸದು. ಶಾಂತಿಭಂಗವಾದ ನಂತರ ಕ್ರಮಕೈಗೊಳ್ಳುವುದಕ್ಕಿಂತ, ಶಾಂತಿಯನ್ನು ಕಾಪಾಡಲು ಮುಂಜಾಗ್ರತಾ ಕ್ರಮ ಕೈಗೊಳ್ಳುವುದು ಅಗತ್ಯ. ಇಲ್ಲದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ನೇರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಶುಕ್ರವಾರ ನಡೆದ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಮಾತನಾಡಿದರು. ಅವರು ರಾಜ್ಯದ ಕರಾವಳಿ ಭಾಗದಲ್ಲಿ ಮರುಕಳಿಸುತ್ತಿರುವ ಕೋಮುಸಂವೇದನಾಶೀಲ ಘಟನೆಗಳನ್ನು ಉಲ್ಲೇಖಿಸುತ್ತಾ, ಶಾಂತಿ ಭಂಗ ಉಂಟಾಗುತ್ತಿರುವ ಕುರಿತು ಗಂಭೀರ ಆತಂಕ ವ್ಯಕ್ತಪಡಿಸಿದರು.

“ಕಾನೂನು ಸುವ್ಯವಸ್ಥೆ ಕದಡಿದರೆ ಡಿಸಿ, ಎಸ್ಪಿಗಳು ನೇರ ಹೊಣೆಗಾರರು. ದುಷ್ಟ ಶಕ್ತಿಗಳು ತಲೆ ಎತ್ತುವ ಮುನ್ನವೇ ಮೊಳಕೆಯಲ್ಲೇ ನಾಶಪಡಿಸಬೇಕಾಗಿದೆ. ಶಾಂತಿಭಂಗವಾದ ಮೇಲೆ ಪೋಸ್ಟ್‌ಮಾರ್ಟಮ್ ಮಾಡುವ ಪ್ರವೃತ್ತಿ ತಪ್ಪಬೇಕು” ಎಂದು ಖಡಕ್ ಎಚ್ಚರಿಕೆ ನೀಡಿದರು.

ಜಿಲ್ಲಾ ಮಟ್ಟದಲ್ಲಿ ಶಾಂತಿ ಸಮಿತಿಗಳ ಅಧ್ಯಕ್ಷರಾಗಿ ಜಿಲ್ಲಾಧಿಕಾರಿಗಳೇ ಇದ್ದಾರೆ. ಶಾಂತಿಯನ್ನು ಕಾಪಾಡುವುದು ಅವರ ನೇರ ಜವಾಬ್ದಾರಿ. ಆದರೆ ಶಾಂತಿಗೆ ಧಕ್ಕೆಯಾಗಿದೆಯೆಂದಾದರೆ, ತಕ್ಷಣ ಕ್ರಮ ಕೈಗೊಳ್ಳದಿರುವುದು ವಿಫಲತೆಯಾಗಿದೆ ಎಂದರು.

“ನಿಮ್ಮ ಎಲ್ಲಾ ಸವಲತ್ತುಗಳು — ಕಾರು, ಮನೆ, ಭದ್ರತಾ ಸಿಬ್ಬಂದಿ — ಜನರ ತೆರಿಗೆ ಹಣದಿಂದಲೇ ಸಿಗುತ್ತಿವೆ. ಈ ಹೊಣೆಗಾರಿಕೆಯನ್ನು ಮರೆಯಬಾರದು. ಜನಪರ ಧೋರಣೆಯೊಂದಿಗೆ ಕಾರ್ಯನಿರ್ವಹಿಸಿ. ಶಿಸ್ತು ತಪ್ಪಿದರೆ ರಾಜಿ ಇಲ್ಲ. ನಾವು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ” ಎಂದು ಸಿಎಂ ತೀವ್ರ ಎಚ್ಚರಿಕೆ ನೀಡಿದರು.

ಕೆಲವು ಇಲಾಖೆಗಳು ಹಿಂದಿನ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳನ್ನು ಶೇ. 100ರಷ್ಟು ಪಾಲನೆ ಮಾಡಿಲ್ಲ ಎಂಬ ಅಸಮಾಧಾನವೂ ಸಿಎಂ ವ್ಯಕ್ತಪಡಿಸಿದರು. ಜನರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ ಎಂದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಖರ್ಗೆ ವಾಗ್ದಾಳಿ: ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ತೀವ್ರ ಆಕ್ರೋಶ

ನೀಟ್ ಅಕ್ರಮ ಹಾಗೂ ಮಂದಿರದ ಟ್ರಸ್ಟ್ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.