
ದೆಹಲಿ : ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿ ಜಾತಿಗಣತಿ ಸಮೀಕ್ಷೆ ನಡೆಸಿ ಈಗಾಗಲೇ ಸುಮಾರು 9-10 ವರ್ಷಗಳಾದ ಹಿನ್ನೆಲೆಯಲ್ಲಿ ಮತ್ತೆ ಸಮೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಘೋಷಿಸಿದ್ದಾರೆ. ಈ ಕುರಿತು ರಾಹುಲ್ ಗಾಂಧಿ ಜೊತೆ ಚರ್ಚೆ ನಡೆಸಿದ್ದು, ಸಮೀಕ್ಷೆಗೆ ಅವರ ಸಮರ್ಥನೆ ದೊರೆತಿದೆ ಎಂದು ತಿಳಿಸಿದರು.
ಈ ಬಾರಿ ಜಾತಿಗಣತಿ ಸಮೀಕ್ಷೆ 90 ದಿನಗಳಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಸಮೀಕ್ಷೆಯ ವಿರುದ್ಧ ಧ್ವನಿ ಎತ್ತಿರುವವರ ಕುರಿತು ಕೂಡ ಚರ್ಚೆ ನಡೆದಿದ್ದು, ಸರ್ಕಾರ ಜನಾಭಿಪ್ರಾಯದ ಹಿನ್ನೆಲೆಯಲ್ಲಿ ಮುಂದಿನ ಕ್ರಮ ತೆಗೆದುಕೊಳ್ಳುತ್ತಿದೆ.
ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ದುರಂತದ ಕುರಿತು ಕೂಡ ಸಭೆಯಲ್ಲಿ ಚರ್ಚಿಸಲಾಗಿದ್ದು, ಸಿಐಡಿ ತನಿಖೆ, ಪೊಲೀಸ್ ಅಧಿಕಾರಿಗಳ ಅಮಾನತು ಹಾಗೂ ಇಂಟಲಿಜೆನ್ಸ್ ಮುಖ್ಯಸ್ಥರ ವರ್ಗಾವಣೆ ಕುರಿತು ಮಾಹಿತಿ ವರಿಷ್ಠರಿಗೆ ನೀಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.