
ಉಜಿರೆ : ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಅವಹೇಳನ ಮಾಡಿದ ಆರೋಪದ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಉಡುಪಿ ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಇಂದು ಉಜಿರೆಯಲ್ಲಿರುವ ಅವರ ನಿವಾಸಕ್ಕೆ ಆಗಮಿಸಿದ ಉಡುಪಿ ಬ್ರಹ್ಮಾವರ ಪೊಲೀಸರ ತಂಡ ಅವರನ್ನು ವಶಕ್ಕೆ ತೆಗೆದುಕೊಂಡಿದೆ.
ಎ.ಎಸ್.ಪಿ. ಸುಧಾಕರ್ ನಾಯಕ್ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. ಬಿ.ಎಲ್. ಸಂತೋಷ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಹೇಳನ ಮಾಡಿರುವ ಕುರಿತು ತಿಮರೋಡಿ ವಿರುದ್ಧ ದೂರು ದಾಖಲಾಗಿತ್ತು. ಈ ದೂರಿನ ಹಿನ್ನಲೆಯಲ್ಲಿ ಬೆಳ್ತಂಗಡಿಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರ ನಿವಾಸಕ್ಕೆ ಆಗಮಿಸಿ ಅವರನ್ನು ಬಂಧಿಸಲಾಗಿದೆ.