ಪರಶುರಾಮ ಮೂರ್ತಿ ಫೈಬರ್ ಎಂಬ ಕಾಂಗ್ರೆಸ್ ಅಪಪ್ರಚಾರಕ್ಕೆ ಸೋಲು: ಸತ್ಯ ಬಹಿರಂಗಪಡಿಸಿದ ಪೊಲೀಸ್ ತನಿಖೆ – ಶಾಸಕ ಸುನಿಲ್ ಕುಮಾರ್

Date:

spot_img

ಉಡುಪಿ: ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ಮತ್ತು ಪ್ರತಿಮೆಯ ಕುರಿತು ಕಾಂಗ್ರೆಸಿಗರು ನಡೆಸುತ್ತಿದ್ದ ನಿರಂತರ ಅಪಪ್ರಚಾರಕ್ಕೆ ಅಂತ್ಯ ಹಾಡಲಾಗಿದೆ ಎಂದು ಕಾರ್ಕಳ ಶಾಸಕ ಮತ್ತು ಮಾಜಿ ಸಚಿವರಾದ ವಿ. ಸುನಿಲ್ ಕುಮಾರ್ ಹೇಳಿದ್ದಾರೆ. ಪ್ರತಿಮೆ ‘ಫೈಬರ್’ನದ್ದು ಎಂದು ನಡೆಸುತ್ತಿದ್ದ ವ್ಯವಸ್ಥಿತ ‘ಟೂಲ್ ಕಿಟ್’ ಅಪಪ್ರಚಾರ ಸುಳ್ಳು ಎಂಬುದು ಪೊಲೀಸ್ ತನಿಖೆಯಿಂದಲೇ ಸಾಬೀತಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕಾರ್ಕಳ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ ಆರೋಪ ಪಟ್ಟಿಯಲ್ಲಿ ಪ್ರತಿಮೆಯನ್ನು ಹಿತ್ತಾಳೆಯಿಂದ ನಿರ್ಮಿಸಲಾಗಿದೆ ಎಂದು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಅಲ್ಲದೆ, ಪರಶುರಾಮ ಪ್ರತಿಮೆಯ ಸೊಂಟದ ಮೇಲ್ಭಾಗವನ್ನು ಮರು ವಿನ್ಯಾಸಗೊಳಿಸುವ ಉದ್ದೇಶದಿಂದ ತೆಗೆಯಲಾಗಿತ್ತು ಎಂಬುದನ್ನೂ ನ್ಯಾಯಾಲಯಕ್ಕೆ ಸ್ಪಷ್ಟಪಡಿಸಿದ್ದಾರೆ. ಈ ಬೆಳವಣಿಗೆಯಿಂದ ‘ಪ್ರತಿಮೆ ಫೈಬರ್‌ನದ್ದು’ ಎಂಬ ಪಿತೂರಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಸುನಿಲ್ ಕುಮಾರ್ ತಿಳಿಸಿದ್ದಾರೆ.

“ಇನ್ನಾದರೂ ರಾಜ್ಯ ಸರ್ಕಾರ ಪರಶುರಾಮ ಥೀಮ್ ಪಾರ್ಕ್‌ಗೆ ನಿಗದಿಪಡಿಸಿದ್ದ ಅನುದಾನವನ್ನು ಬಿಡುಗಡೆ ಮಾಡಬೇಕು. ಇದರ ಜೊತೆಗೆ, ಈ ತಾಣವನ್ನು ಪ್ರವಾಸೋದ್ಯಮಕ್ಕೆ ಮತ್ತೆ ತೆರೆಯಬೇಕು ಎಂದು ಒತ್ತಾಯಿಸುತ್ತೇನೆ. ಅಭಿವೃದ್ಧಿ ವಿಚಾರದಲ್ಲಿ ನಡೆಸುವ ದ್ವೇಷದ ರಾಜಕಾರಣಕ್ಕೆ ತೆರೆ ಬೀಳಬೇಕು” ಎಂದು ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.