
ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಪ್ರಣಾಳಿಕೆಯಲ್ಲಿ ದೆಹಲಿ ಜನತೆಗೆ ಹಲವು ಪ್ರಮುಖ ಭರವಸೆಗಳನ್ನು ನೀಡಿದೆ. ಮಹಿಳೆಯರಿಗೆ ಮಾಸಿಕ ₹ 2,500, ಎಲ್‌ಪಿಜಿ ಸಿಲಿಂಡರ್‌ಗೆ ₹ 500, ಹಿರಿಯ ನಾಗರಿಕರಿಗೆ ₹ 2,500 ಮಾಸಿಕ ಪಿಂಚಣಿ ಸೇರಿದಂತೆ ಕರ್ನಾಟಕ ಗೃಹಲಕ್ಷ್ಮಿ ಯೋಜನೆಯಂತಹ ಜನಪರ ಯೋಜನೆಗಳನ್ನು ಜಾರಿಗೆ ತರುವುದಾಗಿ ಪಕ್ಷ ಘೋಷಿಸಿದೆ.
ಫೆಬ್ರವರಿ 5 ರಂದು ದೆಹಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಫೆಬ್ರವರಿ 8 ರಂದು ಫಲಿತಾಂಶ ಹೊರಬೀಳಲಿದೆ. ಚುನಾವಣಾ ಅಖಾಡದಲ್ಲಿ ಬಿಜೆಪಿ ತನ್ನ ಪ್ರಬಲ ಪ್ರಣಾಳಿಕೆಯೊಂದಿಗೆ ಮತದಾರರ ಮನ ಗೆಲ್ಲುವ ನಿರೀಕ್ಷೆಯಲ್ಲಿದೆ.