
ನವದೆಹಲಿ: ಇಲ್ಲಿನ ಐತಿಹಾಸಿಕ ಕೆಂಪು ಕೋಟೆ (Red Fort) ಬಳಿ ನವೆಂಬರ್ 10 ರಂದು ಸಂಭವಿಸಿದ ಕಾರು ಸ್ಫೋಟ ಘಟನೆಯಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ದೆಹಲಿಯ ಲೋಕ ನಾಯಕ್ ಜೈ ಪ್ರಕಾಶ್ ಆಸ್ಪತ್ರೆಗೆ (LNJP Hospital) ಭೇಟಿ ನೀಡಿದರು.
ಎರಡು ದಿನಗಳ ಭೂತಾನ್ ಪ್ರವಾಸದಲ್ಲಿದ್ದ ಪ್ರಧಾನಿ ಮೋದಿ ಅವರು ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ, ಅಲ್ಲಿಂದ ನೇರವಾಗಿ ಆಸ್ಪತ್ರೆಗೆ ತೆರಳಿದರು. ಗಾಯಾಳುಗಳನ್ನು ಭೇಟಿಯಾದ ಪ್ರಧಾನಿ ಮೋದಿ ಅವರು, ಅವರ ಆರೋಗ್ಯ ವಿಚಾರಿಸಿ, ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದರು.
ನವೆಂಬರ್ 10 ರಂದು ದೆಹಲಿಯ ಕೆಂಪು ಕೋಟೆ ಬಳಿ ಸಂಭವಿಸಿದ ಈ ಭೀಕರ ಕಾರು ಸ್ಫೋಟದಲ್ಲಿ ಕನಿಷ್ಠ 12 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.













