spot_img

ಕಾಂಗ್ರೆಸ್ ಸಿದ್ಧಾಂತ ಜನರಿಗೆ ತಲುಪಿಸಿ: ಯಶಸ್ಸು ತಾತ್ಕಾಲಿಕವಲ್ಲ ಎಂದ ಕಿಮ್ಮನೆ ರತ್ನಾಕರ್

Date:

spot_img

ಉಡುಪಿ: ಕಾಂಗ್ರೆಸ್ ಪಕ್ಷದ ಸೈದ್ಧಾಂತಿಕ ನಿಲುವು ಮತ್ತು ವಿಚಾರಧಾರೆಗಳನ್ನು ಜನಸಾಮಾನ್ಯರಿಗೆ ಪರಿಣಾಮಕಾರಿಯಾಗಿ ತಲುಪಿಸುವಂತೆ ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿಯ ಉಪಾಧ್ಯಕ್ಷ ಕಿಮ್ಮನೆ ರತ್ನಾಕರ್ ಅವರು ಕಾರ್ಯಕರ್ತರಿಗೆ ಕರೆ ನೀಡಿದರು. ನಗರದ ಪುರಭವನದಲ್ಲಿ ನಡೆದ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಕಿಮ್ಮನೆ ರತ್ನಾಕರ್ ಮಾತನಾಡಿ, “ಕಾಂಗ್ರೆಸ್ ಸಿದ್ಧಾಂತ ಇನ್ನೂ ಜನರಿಗೆ ಸಂಪೂರ್ಣವಾಗಿ ತಲುಪಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಯಶಸ್ಸು ಕಂಡಿರುವುದು ಬಿಜೆಪಿಯ ಆಡಳಿತ ವೈಫಲ್ಯದಿಂದ. ಇದು ಶಾಶ್ವತವಲ್ಲ, ಆದ್ದರಿಂದ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವ ಕಾರ್ಯ ಆಗಬೇಕು” ಎಂದು ಒತ್ತಿ ಹೇಳಿದರು.

ಕಾಂಗ್ರೆಸ್‌ ಪಕ್ಷಕ್ಕೆ ರಾಹುಲ್ ಗಾಂಧಿಯವರಂತಹ ಸೈದ್ಧಾಂತಿಕ ಬದ್ಧತೆಯ ನಾಯಕ ಸಿಕ್ಕಿರುವುದು ದೇಶದ ಅದೃಷ್ಟ. ಅವರ ಅಭಿವೃದ್ಧಿ ದೃಷ್ಟಿಕೋನ ಮತ್ತು ವ್ಯವಸ್ಥೆಯನ್ನು ಸರಿಪಡಿಸುವ ಯೋಚನೆಗಳು ಸ್ಪಷ್ಟವಾಗಿವೆ ಎಂದು ರತ್ನಾಕರ್ ಪ್ರಶಂಸಿಸಿದರು.

ಈ ಸಭೆಯಲ್ಲಿ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು, ಮುಖಂಡರಾದ ಪ್ರಸಾದ್ ರಾಜ್ ಕಾಂಚನ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪ್ರೋಟಾನ್‌ನಿಂದ ‘ಲುಮೋ’ AI ಚಾಟ್‌ಬಾಟ್ ಬಿಡುಗಡೆ

ಸುರಕ್ಷಿತ ಇಮೇಲ್ ಮತ್ತು ವಿಪಿಎನ್‌ ಸೇವೆಗಳಿಗೆ ಹೆಸರುವಾಸಿಯಾಗಿರುವ ಪ್ರೋಟಾನ್ ಕಂಪನಿಯು, ಹೊಸ ಎಐ ಚಾಟ್‌ಬಾಟ್ ಒಂದನ್ನು ಬಿಡುಗಡೆ ಮಾಡಿದೆ. ‘ಲುಮೋ’ (Lumo) ಎಂದು ಹೆಸರಿಸಲಾದ ಈ ಚಾಟ್‌ಬಾಟ್ ಅನ್ನು ಗೌಪ್ಯತೆಯನ್ನು ಪ್ರಥಮ ಆದ್ಯತೆಯಾಗಿಟ್ಟುಕೊಂಡು ವಿನ್ಯಾಸಗೊಳಿಸಲಾಗಿದೆ.

ಹುಲಿಕಲ್ ಘಾಟಿಯಲ್ಲಿ ಮತ್ತೊಮ್ಮೆ ಭಾರೀ ಕುಸಿತ; ಶೀಘ್ರವೇ ಬೃಹತ್ ವಾಹನಗಳ ಸಂಚಾರ ನಿಷೇಧ ಸಾಧ್ಯತೆ!

ರಾಜ್ಯದ ಪ್ರಮುಖ ಘಾಟ್‌ಗಳಲ್ಲಿ ಒಂದಾದ ಹುಲಿಕಲ್ ಘಾಟ್ (ಬಾಳೆಬರೆ) ರಸ್ತೆಯಲ್ಲಿ ಮತ್ತೆ ದೊಡ್ಡ ಪ್ರಮಾಣದ ಕುಸಿತ ಸಂಭವಿಸಿದ್ದು, ಇದು ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ.

ಧರ್ಮಸ್ಥಳ ಪ್ರಕರಣ: 11ನೇ ಸ್ಥಳದಲ್ಲಿ ಶೋಧ ವಿಫಲ; 6ನೇ ಸ್ಥಳದ ಅಸ್ಥಿಪಂಜರ ಕೇಸ್ SITಗೆ ವರ್ಗಾವಣೆ!

ಹಲವಾರು ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಧರ್ಮಸ್ಥಳ ಪ್ರಕರಣದ ತನಿಖೆ ಮುಂದುವರೆದಿದೆ. ಆದರೆ, ಆಗಸ್ಟ್ 5ರಂದು ನಡೆಸಿದ ಶೋಧಕಾರ್ಯದಲ್ಲಿ ದೂರುದಾರರು ಗುರುತು ಮಾಡಿದ್ದ 11ನೇ ಸ್ಥಳದಲ್ಲಿ ಯಾವುದೇ ಕುರುಹು ಪತ್ತೆಯಾಗಿಲ್ಲ.

ಧರ್ಮಸ್ಥಳ ತನಿಖೆಗೆ ‘GPR’ ಬಳಸುವಂತೆ ಸರ್ಕಾರಕ್ಕೆ ನಟ ಚೇತನ್ ಮನವಿ

ಧರ್ಮಸ್ಥಳದಲ್ಲಿ ಶವಗಳನ್ನು ಹೂತಿದ್ದಾರೆ ಎನ್ನಲಾದ ಪ್ರಕರಣದ ತನಿಖೆಗಾಗಿ SIT ನಡೆಸುತ್ತಿರುವ ಶೋಧಕಾರ್ಯಕ್ಕೆ ಗ್ರೌಂಡ್ ಪೆನಿಟ್ರೇಟಿಂಗ್ ರಾಡಾರ್ (GPR) ಮತ್ತು ಇತರ ಆಧುನಿಕ ತಂತ್ರಜ್ಞಾನಗಳನ್ನು ಬಳಸುವಂತೆ ನಟ ಮತ್ತು ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸಾ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.