ಕಾಂಗ್ರೆಸ್ ಸಿದ್ಧಾಂತ ಜನರಿಗೆ ತಲುಪಿಸಿ: ಯಶಸ್ಸು ತಾತ್ಕಾಲಿಕವಲ್ಲ ಎಂದ ಕಿಮ್ಮನೆ ರತ್ನಾಕರ್

Date:

spot_img

ಉಡುಪಿ: ಕಾಂಗ್ರೆಸ್ ಪಕ್ಷದ ಸೈದ್ಧಾಂತಿಕ ನಿಲುವು ಮತ್ತು ವಿಚಾರಧಾರೆಗಳನ್ನು ಜನಸಾಮಾನ್ಯರಿಗೆ ಪರಿಣಾಮಕಾರಿಯಾಗಿ ತಲುಪಿಸುವಂತೆ ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿಯ ಉಪಾಧ್ಯಕ್ಷ ಕಿಮ್ಮನೆ ರತ್ನಾಕರ್ ಅವರು ಕಾರ್ಯಕರ್ತರಿಗೆ ಕರೆ ನೀಡಿದರು. ನಗರದ ಪುರಭವನದಲ್ಲಿ ನಡೆದ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಕಿಮ್ಮನೆ ರತ್ನಾಕರ್ ಮಾತನಾಡಿ, “ಕಾಂಗ್ರೆಸ್ ಸಿದ್ಧಾಂತ ಇನ್ನೂ ಜನರಿಗೆ ಸಂಪೂರ್ಣವಾಗಿ ತಲುಪಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಯಶಸ್ಸು ಕಂಡಿರುವುದು ಬಿಜೆಪಿಯ ಆಡಳಿತ ವೈಫಲ್ಯದಿಂದ. ಇದು ಶಾಶ್ವತವಲ್ಲ, ಆದ್ದರಿಂದ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವ ಕಾರ್ಯ ಆಗಬೇಕು” ಎಂದು ಒತ್ತಿ ಹೇಳಿದರು.

ಕಾಂಗ್ರೆಸ್‌ ಪಕ್ಷಕ್ಕೆ ರಾಹುಲ್ ಗಾಂಧಿಯವರಂತಹ ಸೈದ್ಧಾಂತಿಕ ಬದ್ಧತೆಯ ನಾಯಕ ಸಿಕ್ಕಿರುವುದು ದೇಶದ ಅದೃಷ್ಟ. ಅವರ ಅಭಿವೃದ್ಧಿ ದೃಷ್ಟಿಕೋನ ಮತ್ತು ವ್ಯವಸ್ಥೆಯನ್ನು ಸರಿಪಡಿಸುವ ಯೋಚನೆಗಳು ಸ್ಪಷ್ಟವಾಗಿವೆ ಎಂದು ರತ್ನಾಕರ್ ಪ್ರಶಂಸಿಸಿದರು.

ಈ ಸಭೆಯಲ್ಲಿ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು, ಮುಖಂಡರಾದ ಪ್ರಸಾದ್ ರಾಜ್ ಕಾಂಚನ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ