
ಪಳ್ಳಿ : ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಪಳ್ಳಿ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಇಂದು ಧರಣಿ ಸತ್ಯಾಗ್ರಹ ನಡೆಯಿತು.
ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಸುಮಿತ್ ಶೆಟ್ಟಿ ಕೌಡೂರುರವರು ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ರಾಜ್ಯ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಆಕ್ರೋಶ ವ್ಯಕ್ತ ಪಡಿಸಿದರು.

ಈ ಸಂದರ್ಭದಲ್ಲಿ ಹರೀಶ್ ನಾಯಕ್ ಪ್ರಸ್ತಾವನೆಗೈದರು . ಸುರೇಶ್ ಸುವರ್ಣ, ಎನ್. ಬಿ. ಬಾಬು, ಅಧ್ಯಕ್ಷರಾದ ಉಷಾ ಅಂಚನ್ ಹಾಗೂ ಶ್ರೀಕಾಂತ್ ಪ್ರಭುರವರು ರಾಜ್ಯ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಮಾತನಾಡಿದರು.
ಈ ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ಬೈಲೂರು ಶಕ್ತಿ ಕೇಂದ್ರದ ಅಧ್ಯಕ್ಷರಾದ ಸಂದೀಪ್ ಅಮೀನ್, ಗ್ರಾಮ ಪಂಚಾಯತ್ ಉಪಾಧ್ಯಕ್ಷರು , ಸದಸ್ಯರು , ಬಿಜೆಪಿ ಗ್ರಾಮ ಸಮಿತಿ ಪದಾಧಿಕಾರಿಗಳು ಸೇರಿದಂತೆ ಪಕ್ಷದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.