
ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ 27ನೇ ವರ್ಷದ ಭಜನಾ ಕಮ್ಮಟೋತ್ಸವವನ್ನು ಸೆಪ್ಟೆಂಬರ್ 14 ರಿಂದ 21 ರವರೆಗೆ ಆಯೋಜಿಸಲಾಗಿದೆ. ಈ ವಾರ್ಷಿಕ ಕಾರ್ಯಕ್ರಮವು ಭಜನೆಯಲ್ಲಿ ರಾಗ, ತಾಳ, ಲಯಗಳ ಬಗ್ಗೆ ತರಬೇತಿ ನೀಡುವ ಗುರಿ ಹೊಂದಿದೆ.
ಸೆಪ್ಟೆಂಬರ್ 14 ರಂದು ಆರಂಭಗೊಳ್ಳುವ ಕಮ್ಮಟವು ಸೆಪ್ಟೆಂಬರ್ 21 ರಂದು ಭಜನೋತ್ಸವದೊಂದಿಗೆ ಸಮಾಪನಗೊಳ್ಳಲಿದೆ. 18 ರಿಂದ 45 ವರ್ಷ ವಯೋಮಾನದವರಿಗೆ ಕಮ್ಮಟದಲ್ಲಿ ಭಾಗವಹಿಸಲು ಅವಕಾಶವಿದೆ. ಆದರೆ, ಈ ಹಿಂದೆ ಧರ್ಮಸ್ಥಳದ ಭಜನಾ ಕಮ್ಮಟದಲ್ಲಿ ಭಾಗವಹಿಸದವರು ಮಾತ್ರ ಅರ್ಜಿ ಸಲ್ಲಿಸಬಹುದು.
ಒಂದು ಭಜನಾ ಮಂಡಳಿಯಿಂದ ಗರಿಷ್ಠ ಇಬ್ಬರಿಗೆ ಅವಕಾಶವಿದ್ದು, ಭಾಗವಹಿಸುವವರು ತಾವು ಕಲಿತು ಇತರರಿಗೆ ಕಲಿಸಿಕೊಡುವ ಸಾಮರ್ಥ್ಯ ಹೊಂದಿರಬೇಕು. ಆಸಕ್ತರು ಆಗಸ್ಟ್ 31ರೊಳಗೆ ತಮ್ಮ ಹೆಸರುಗಳನ್ನು ನೋಂದಾಯಿಸಬಹುದು ಎಂದು ಭಜನಾ ಕಮ್ಮಟದ ಸಂಚಾಲಕ ಟಿ. ಸುಬ್ರಹ್ಮಣ್ಯ ಪ್ರಸಾದ್ ಮತ್ತು ಕಾರ್ಯದರ್ಶಿ ಎ. ವಿ. ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.