ಧರ್ಮಸ್ಥಳ ಬುರುಡೆ ಕೇಸ್‌: ಮಾಸ್ಕ್‌ ಮ್ಯಾನ್‌ ಅಸಲಿ ಹೆಸರು ಬಹಿರಂಗ

Date:

spot_img

ಧರ್ಮಸ್ಥಳ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನೂರಾರು ಮೃತದೇಹಗಳನ್ನು ಹೂತಿದ್ದಾಗಿ ಆರೋಪಿಸಿದ್ದ ‘ಮಾಸ್ಕ್ ಮ್ಯಾನ್’ನನ್ನು ವಿಶೇಷ ತನಿಖಾ ದಳ (ಎಸ್ಐಟಿ) ಬಂಧಿಸಿದೆ. ಆತನ ನಿಜವಾದ ಹೆಸರು ಸಿ.ಎನ್. ಚಿನ್ನಯ್ಯ ಎಂದು ತಿಳಿದುಬಂದಿದೆ. ಈ ಹಿಂದೆ ಆತನನ್ನು ‘ಭೀಮ’ ಎಂದೂ ಕರೆಯಲಾಗಿತ್ತು.

ಸುಳ್ಳು ಆರೋಪದಿಂದ ಬಂಧನ

1995 ರಿಂದ 2014 ರವರೆಗೆ ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಮಿಕನಾಗಿ ಕೆಲಸ ಮಾಡಿದ್ದ ಚಿನ್ನಯ್ಯ, ಲೈಂಗಿಕ ದೌರ್ಜನ್ಯಕ್ಕೊಳಗಾದ ಮತ್ತು ಕೊಲೆಯಾದ ಮಹಿಳೆಯರು ಹಾಗೂ ಮಕ್ಕಳ ಮೃತದೇಹಗಳನ್ನು ತಾನೇ ಹೂತಿರುವುದಾಗಿ ಆರೋಪಿಸಿದ್ದ. ಈತನ ಹೇಳಿಕೆ ಆಧರಿಸಿ ಎಸ್‌ಐಟಿ ತನಿಖೆ ನಡೆಸಿದರೂ ಯಾವುದೇ ಮೃತದೇಹಗಳ ಸುಳಿವು ಸಿಕ್ಕಿರಲಿಲ್ಲ. ಕೇವಲ ಎರಡು ಕಡೆಗಳಲ್ಲಿ ಮೂಳೆಗಳು ಪತ್ತೆಯಾಗಿದ್ದವು.

ಇದರಿಂದ ಅನುಮಾನಗೊಂಡ ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ನೇತೃತ್ವದಲ್ಲಿ ಶುಕ್ರವಾರ ಬೆಳಿಗ್ಗೆಯಿಂದಲೇ ಚಿನ್ನಯ್ಯನನ್ನು ತೀವ್ರ ವಿಚಾರಣೆ ನಡೆಸಲಾಗಿತ್ತು. ವಿಚಾರಣೆಯ ವೇಳೆ ಆತನ ಆರೋಪಗಳು ಸುಳ್ಳು ಎಂದು ದೃಢಪಟ್ಟ ಹಿನ್ನೆಲೆಯಲ್ಲಿ ಪೊಲೀಸರು ಚಿನ್ನಯ್ಯನನ್ನು ಬಂಧಿಸಿದ್ದಾರೆ.

ಪ್ರಸ್ತುತ, ಬಂಧಿತ ಸಿ.ಎನ್. ಚಿನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲು ಎಸ್‌ಐಟಿ ಸಿದ್ಧತೆ ನಡೆಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.