
ಬೆಳ್ತಂಗಡಿ: ‘ಧರ್ಮಸ್ಥಳದಲ್ಲಿ ಹೆಣ ಹೂತಿದ್ದೇನೆ’ ಎಂದು ಹಲವು ದಿನಗಳ ಕಾಲ ಸುದ್ದಿಯಲ್ಲಿದ್ದ ಆರೋಪಿ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅವಧಿ ಮುಗಿದಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಶುಕ್ರವಾರ (ಸೆಪ್ಟೆಂಬರ್ 6) ಬೆಳ್ತಂಗಡಿ ನ್ಯಾಯಾಲಯಕ್ಕೆ ಆರೋಪಿಯನ್ನು ಹಾಜರುಪಡಿಸಲಾಯಿತು.
14 ದಿನಗಳ ನ್ಯಾಯಾಂಗ ಬಂಧನ
ನ್ಯಾಯಾಲಯದ ಆದೇಶದ ಮೇರೆಗೆ, ಆರೋಪಿ ಚಿನ್ನಯ್ಯನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆತನನ್ನು ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.




































