ಧರ್ಮಸ್ಥಳ ಪ್ರಕರಣದ ವರದಿ ವಿಳಂಬಕ್ಕೆ ಕಾರಣ ಬಿಚ್ಚಿಟ್ಟ ಗೃಹ ಸಚಿವ ಡಾ. ಜಿ. ಪರಮೇಶ್ವರ್

Date:

spot_img
Parameshwara11

ಬೆಂಗಳೂರು: ಧರ್ಮಸ್ಥಳ ಸುತ್ತಮುತ್ತ ಕಾಡಿನಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದಾರೆ ಎನ್ನಲಾದ, ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದ ಪ್ರಕರಣದ ತನಿಖಾ ವರದಿ ಸಲ್ಲಿಸಲು ತಡವಾಗುತ್ತಿರುವ ಕುರಿತು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಕಾರಣವನ್ನು ಸ್ಪಷ್ಟಪಡಿಸಿದ್ದಾರೆ.

“ಪ್ರಕರಣದ ವರದಿಯನ್ನ ಎಲ್ಲಾ ಆಯಾಮಗಳಲ್ಲಿ ನೋಡಿ ಕೊಡಬೇಕಾಗುತ್ತದೆ. ಸದ್ಯ ತಾಂತ್ರಿಕ ಕಾರಣಗಳಿಂದ ವಿಳಂಬ ಆಗಿದೆ. ಮಹಿಳಾ ಆಯೋಗವು ಧರ್ಮಸ್ಥಳ ವಿಚಾರವಾಗಿ ಸಮಗ್ರ ತನಿಖೆ ಮಾಡುವಂತೆ ಮನವಿ ಮಾಡಿದೆ. ಸಮಗ್ರ ತನಿಖೆ ಆದರೆ ಎಲ್ಲಾ ಮಾಹಿತಿಗಳು ಹೊರಗೆ ಬರುತ್ತದೆ, ಅದನ್ನ ಮಾಡಲು ಸಮಯ ಬೇಕಾಗುತ್ತದೆ” ಎಂದು ಸಚಿವರು ತಿಳಿಸಿದ್ದಾರೆ.

ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‍ಐಟಿ)ದ ಮುಖ್ಯಸ್ಥರಿಗೆ ರಾಜ್ಯ ಮಹಿಳಾ ಆಯೋಗವು ಪತ್ರ ಬರೆದಿದ್ದು, ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಅತ್ಯಾಚಾರ, ಕೊಲೆ ಪ್ರಕರಣಗಳ ಜತೆಗೆ ಅಸಹಜ ಮತ್ತು ಅನುಮಾನಾಸ್ಪದ ಸಾವು ಪ್ರಕರಣಗಳ ಬಗ್ಗೆಯೂ ಸಮಗ್ರವಾಗಿ ತನಿಖೆಯನ್ನು ನಡೆಸಬೇಕೆಂದು ಕೋರಿತ್ತು. ಈ ವಿಸ್ತೃತ ತನಿಖೆಯ ಬೇಡಿಕೆಯಿಂದಾಗಿ ವರದಿ ಸಲ್ಲಿಸಲು ತಡವಾಗುತ್ತಿದೆ ಎಂದು ಗೃಹ ಸಚಿವರು ದೃಢಪಡಿಸಿದ್ದಾರೆ.

ಆಯೋಗದ ಪತ್ರದಲ್ಲಿದ್ದ ಪ್ರಮುಖಾಂಶಗಳು

ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ತಮ್ಮ ಪತ್ರದಲ್ಲಿ ಈ ಕೆಳಗಿನ ಅಂಶಗಳನ್ನು ಉಲ್ಲೇಖಿಸಿದ್ದರು:

  • ಕಳೆದ 20ಕ್ಕೂ ಹೆಚ್ಚು ವರ್ಷಗಳಿಂದ ಗಂಭೀರ ಸ್ವರೂಪದ ದೌರ್ಜನ್ಯ, ಹತ್ಯೆ, ಅತ್ಯಾಚಾರ, ಅಸ್ವಾಭಾವಿಕ ಸಾವು ಮತ್ತು ನಾಪತ್ತೆ ಪ್ರಕರಣಗಳು ಕೇಳಿಬರುತ್ತಿವೆ.
  • ಎಸ್‍ಐಟಿ ರಚನೆಯ ಆಶಯವು ಕೇವಲ ಒಂದು ಕ್ರಿಮಿನಲ್ ಮೊಕದ್ದಮೆಯ ತನಿಖೆಗೆ ಸೀಮಿತವಾಗಬಾರದು. ಬದಲಿಗೆ, ಮಹಿಳೆಯರಿಗೆ ಸಂಬಂಧಿಸಿದ ಪ್ರಕರಣಗಳ ಸಮಗ್ರ ತನಿಖೆಯನ್ನು ಎಸ್‍ಐಟಿ ಮಾಡಬೇಕೆಂಬುದನ್ನು ಸೂಚಿಸುತ್ತದೆ.
  • ಇಲ್ಲಿಯವರೆಗೆ, ಎಸ್‍ಐಟಿ ರಚನೆಯಾದಾಗಿನಿಂದ ಕೇವಲ ನ್ಯಾಯಾಲಯದ ಮುಂದೆ ಹೇಳಿಕೆ ನೀಡಿದ ‘ಚಿನ್ನಯ್ಯ’ ಎಂಬ ವ್ಯಕ್ತಿಯ ಹೇಳಿಕೆಯನ್ನು ಆಧರಿಸಿ ಮಾನವ ಕಳೇಬರಗಳ ಉತ್ಖನನಕ್ಕೆ ಸೀಮಿತವಾಗಿ ತನಿಖೆ ನಡೆದಿರುವುದು ಕಂಡುಬಂದಿದೆ.
  • ಉತ್ಖನನದಲ್ಲಿ ದೊರೆತ ಅಸ್ಥಿಪಂಜರಗಳ ಅವಶೇಷಗಳ ಬಗ್ಗೆ, ಸಾವು ಸಂಭವಿಸಿದ ಕಾರಣ ಮತ್ತು ಮಹಿಳೆಯರ ಅಸ್ಥಿಪಂಜರಗಳನ್ನು ಗುರುತಿಸುವ ಬಗ್ಗೆ ಪೂರ್ಣ ಮಾಹಿತಿ ಪತ್ತೆ ಹಚ್ಚುವಂತೆ ಆಯೋಗವು ಎಸ್ಐಟಿಗೆ ನಿರ್ದೇಶನ ನೀಡಿದೆ.

ಈ ಹಿನ್ನೆಲೆಯಲ್ಲಿ, ಎಸ್‍ಐಟಿ ತನ್ನ ತನಿಖೆಯ ವ್ಯಾಪ್ತಿಯನ್ನು ವಿಸ್ತರಿಸಬೇಕಾದ ಕಾರಣ, ವರದಿ ಸಲ್ಲಿಕೆಯಲ್ಲಿ ವಿಳಂಬವಾಗುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ