ಧರ್ಮಸ್ಥಳ ಪ್ರಕರಣ: ಗ್ರಾಮ ಪಂಚಾಯತಿಯಿಂದ 1985 ರಿಂದ 2000ರ ಅವಧಿಯ ಅನಾಥ ಶವಗಳ ಬಗ್ಗೆ ವರದಿ ಕೇಳಿದ ಎಸ್‌ಐಟಿ!

Date:

spot_img

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ತಲೆಬುರುಡೆ ಪತ್ತೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಎಸ್‌ಐಟಿ (ವಿಶೇಷ ತನಿಖಾ ದಳ) ಇದೀಗ ಹೊಸ ದಿಕ್ಕಿನಲ್ಲಿ ಹೆಜ್ಜೆ ಇರಿಸಿದೆ. ಅನಾಥ ಶವಗಳ ಸತ್ಯಾಂಶವನ್ನು ಪತ್ತೆಹಚ್ಚಲು ಧರ್ಮಸ್ಥಳ ಗ್ರಾಮ ಪಂಚಾಯಿತಿಯಿಂದ ಮಹತ್ವದ ವರದಿಯನ್ನು ಕೇಳಿದೆ.

15 ವರ್ಷಗಳ ದಾಖಲೆ ಕೇಳಿದ ಎಸ್‌ಐಟಿ

ಜುಲೈ 31ರಂದು ‘ಮಾಸ್ಕ್‌ಮ್ಯಾನ್‌’ ತೋರಿಸಿದ್ದ ಆರನೇ ಪಾಯಿಂಟ್‌ನಲ್ಲಿ ಕೆಲವು ಮೂಳೆಗಳು ದೊರಕಿದ ಹಿನ್ನೆಲೆಯಲ್ಲಿ, ಎಸ್‌ಐಟಿ ತಂಡವು ಗ್ರಾಮ ಪಂಚಾಯಿತಿಗೆ ಸೂಚನೆ ನೀಡಿದೆ. ಅದರಂತೆ, 1985 ರಿಂದ 2000ರ ವರೆಗೆ ಧರ್ಮಸ್ಥಳದಲ್ಲಿ ಎಲ್ಲೆಲ್ಲಿ ಅನಾಥ ಶವಗಳನ್ನು ಹೂತಿದ್ದು, ಯಾವ ಸಂದರ್ಭದಲ್ಲಿ ಎಷ್ಟು ಶವಗಳನ್ನು ಹೂತಿಡಲಾಗಿದೆ ಎಂಬ ಸಂಪೂರ್ಣ ವರದಿ ನೀಡುವಂತೆ ಸೂಚಿಸಿದೆ.

ರುದ್ರಭೂಮಿ ಕುರಿತೂ ಮಾಹಿತಿ ಸಂಗ್ರಹ

ಈ ಅವಧಿಯಲ್ಲಿ ಧರ್ಮಸ್ಥಳದಲ್ಲಿ ರುದ್ರಭೂಮಿ ಮಂಜೂರಾಗಿದ್ದು ಯಾವಾಗ? ಅದಕ್ಕೂ ಮೊದಲು ಕಂದಾಯ ಇಲಾಖೆಯಿಂದ ಯಾವ ಸ್ಥಳಗಳಲ್ಲಿ ಹೆಣಗಳನ್ನು ಹೂತಿಡಲಾಗುತ್ತಿತ್ತು ಎಂಬ ಸಂಪೂರ್ಣ ವರದಿ ನೀಡುವಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ (ಪಿಡಿಒ) ಎಸ್‌ಐಟಿ ಸೂಚನೆ ನೀಡಿದೆ. ಪಂಚಾಯಿತಿಯಿಂದ ವರದಿ ಇಂದು ಬರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ವರದಿಯು ತನಿಖೆಯಲ್ಲಿ ಮಹತ್ವದ ಸುಳಿವು ನೀಡುವ ನಿರೀಕ್ಷೆಯಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ