ಧರ್ಮಸ್ಥಳ ಪ್ರಕರಣ: ತಿಮರೋಡಿ, ಸಮೀರ್, ಮಟ್ಟಣ್ಣನವರ್ ರವರ ತನಿಖೆಗೆ ಸ್ನೇಹಮಯಿ ಕೃಷ್ಣ ಆಗ್ರಹ!

Date:

spot_img

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವುದಾಗಿ ಆರೋಪಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ (SP) ಪತ್ರ ಬರೆದಿದ್ದಾರೆ. ಈ ಗಂಭೀರ ಆರೋಪದ ಸತ್ಯಾಸತ್ಯತೆಯನ್ನು ತನಿಖೆಯ ಮೂಲಕ ಕಂಡುಕೊಳ್ಳುವಂತೆ ಮತ್ತು ಸಾರ್ವಜನಿಕರಿಗೆ ಸ್ಪಷ್ಟ ಮಾಹಿತಿ ನೀಡುವಂತೆ ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಅಲ್ಲದೆ, ಈ ಬಗ್ಗೆ ಆರೋಪ ಮಾಡುತ್ತಿರುವ ಮಹೇಶ್‌ ಶೆಟ್ಟಿ ತಿಮರೋಡಿ, ಯೂಟ್ಯೂಬರ್ ಸಮೀರ್ ಎಮ್‌ಡಿ ಮತ್ತು ಗಿರೀಶ್ ಮಟ್ಟಣ್ಣನವರ್ ಅವರನ್ನೇ ತನಿಖೆಗೆ ಒಳಪಡಿಸುವಂತೆ ಸ್ನೇಹಮಯಿ ಕೃಷ್ಣ ಆಗ್ರಹಿಸಿದ್ದಾರೆ.

ಧರ್ಮಸ್ಥಳ ಗ್ರಾಮದಲ್ಲಿ 100ಕ್ಕೂ ಹೆಚ್ಚು ಮೃತದೇಹಗಳನ್ನು ತಾನು ಹೂತು ಹಾಕಿದ್ದೇನೆ ಎಂದು ಅನಾಮಧೇಯ ವ್ಯಕ್ತಿಯೊಬ್ಬರು ಆರೋಪಿಸಿರುವುದು ರಾಜ್ಯದಾದ್ಯಂತ ಭಾರೀ ಸಂಚಲನ ಸೃಷ್ಟಿಸಿದೆ. ಈ ಅನಾಮಧೇಯ ವ್ಯಕ್ತಿ ಜೊತೆಗೆ ಸಮೀರ್, ಮಹೇಶ್‌‌ ಶೆಟ್ಟಿ ತಿಮರೋಡಿ, ಮತ್ತು ಗಿರೀಶ್ ಮಟ್ಟಣ್ಣನವರ್ ಎಂಬ ವ್ಯಕ್ತಿಗಳು ಕೂಡಾ ಇದೇ ಆರೋಪಗಳನ್ನು ಮಾಡುತ್ತಿದ್ದಾರೆ. ಈ ವ್ಯಕ್ತಿಗಳು ಸಮಾಜದಲ್ಲಿ ಅಶಾಂತಿ ಉಂಟುಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಸ್ನೇಹಮಯಿ ಕೃಷ್ಣ, ಈ ಪ್ರಕರಣದ ತನಿಖೆಯನ್ನು ಶೀಘ್ರಗತಿಯಲ್ಲಿ ನಡೆಸಿ, ಸಾಕ್ಷಿಗಳನ್ನು ಸಂಗ್ರಹಿಸಿ, ಸತ್ಯಾಸತ್ಯತೆಯನ್ನು ಜನರಿಗೆ ಬಹಿರಂಗಪಡಿಸುವಂತೆ ಒತ್ತಾಯಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ