spot_img

ಧರ್ಮಸ್ಥಳ ಅಪರಾಧ ಪ್ರಕರಣಗಳು: ವಿಸ್ತೃತ ತನಿಖೆಗೆ ಕೇಂದ್ರ ಸಚಿವೆ ಅನ್ನಪೂರ್ಣ ದೇವಿ ಆಗ್ರಹ!

Date:

ಬೆಳ್ತಂಗಡಿ: ಧರ್ಮಸ್ಥಳ ಸುತ್ತಮುತ್ತ ನಡೆದ ಹತ್ತಾರು ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ ತಾನೇ ಹೆಣಗಳನ್ನು ಹೂತು ಹಾಕಿದ್ದೆ ಎಂದು ಹೇಳಿಕೊಂಡಿದ್ದ ಅನಾಮಿಕ ವ್ಯಕ್ತಿಯೊಬ್ಬರು ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿದ್ದು, ಪ್ರಕರಣ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಈ ಬೆನ್ನಲ್ಲೇ, ಧರ್ಮಸ್ಥಳ ಗ್ರಾಮದ ಅಪರಾಧ ಕೃತ್ಯಗಳ ಬಗ್ಗೆ ವಿಸ್ತೃತ ತನಿಖೆ ನಡೆಸಿ, ಅನಾಮಧೇಯ ವ್ಯಕ್ತಿಗೆ ರಕ್ಷಣೆ ನೀಡಿ ಎಂದು ಕೇಂದ್ರ ಮಕ್ಕಳ ಮತ್ತು ಮಹಿಳಾ ಕಲ್ಯಾಣ ಸಚಿವೆ ಅನ್ನಪೂರ್ಣ ದೇವಿ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಅನಾಮಧೇಯ ವ್ಯಕ್ತಿಯೊಬ್ಬರು ಧರ್ಮಸ್ಥಳದ ಅಪರಾಧಗಳ ಕುರಿತು ಪತ್ರ ಬರೆದು ಸಂಚಲನ ಮೂಡಿಸಿದ್ದು ಹೌದು. ಈ ಕುರಿತು TimesNow ಸುದ್ದಿ ವಾಹಿನಿಯೊಂದಿಗೆ ಮಾತನಾಡಿದ ಸಚಿವೆ ಅನ್ನಪೂರ್ಣ ದೇವಿ, “ಧರ್ಮಸ್ಥಳದಲ್ಲಿ 1995 ರಿಂದ 2014 ರವರೆಗೆ ಈ ರೀತಿಯ ಘಟನೆಗಳು ದೀರ್ಘಕಾಲದವರೆಗೆ ನಡೆದಿರುವುದು ಅಚ್ಚರಿ ತಂದಿದೆ. ಇದುವರೆಗೆ ಯಾರಿಗೂ ಈ ಬಗ್ಗೆ ತಿಳಿಯದಿರುವುದು ನಿಜಕ್ಕೂ ಗಂಭೀರವಾದ ವಿಷಯ” ಎಂದು ಹೇಳಿದ್ದಾರೆ.

ಇದಲ್ಲದೆ, “ಈಗ ಅನಾಮಧೇಯ ವ್ಯಕ್ತಿ ಈ ಕುರಿತ ಮಾಹಿತಿ ಬಹಿರಂಗಪಡಿಸಿದ್ದಾರೆ. ಕರ್ನಾಟಕ ಸರ್ಕಾರವು ಮಾಹಿತಿ ನೀಡಿದ ಸಾಕ್ಷಿಗೆ ರಕ್ಷಣೆ ನೀಡಬೇಕು. ಈ ವಿಷಯದ ಬಗ್ಗೆ ಸಂಪೂರ್ಣ ಮತ್ತು ವಿಸ್ತೃತವಾದ ತನಿಖೆ ನಡೆಸಬೇಕು. ತಕ್ಷಣವೇ ತನಿಖೆ ಕೈಗೊಳ್ಳಬೇಕು” ಎಂದು ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ವಿಶ್ವ ಆತ್ಮಹತ್ಯಾ ನಿರೋಧ ದಿನ

ವಿಶ್ವ ಆರೋಗ್ಯ ಸಂಸ್ಥೆ (WHO) ಮತ್ತು ಅಂತರರಾಷ್ಟ್ರೀಯ ಆತ್ಮಹತ್ಯಾ ನಿರೋಧ ಸಂಘಟನೆಯ (IASP) ಜಂಟಿ ಉದ್ದೇಶದೊಂದಿಗೆ ಪ್ರತಿ ವರ್ಷ ಸೆಪ್ಟೆಂಬರ್ 10 ರಂದು ಈ ದಿನವನ್ನು ಆಚರಿಸಲಾಗುತ್ತದೆ.

ಆಪಲ್‌ನಿಂದ ಐಫೋನ್ ಲೋಕಕ್ಕೆ ಹೊಸ ಸ್ಪರ್ಧಿ: ಅತಿ ತೆಳುವಾದ ‘ಐಫೋನ್ ಏರ್’ ಅನಾವರಣ!

ಅತಿ ತೆಳುವಾದ ಐಫೋನ್ 'ಏರ್' ಮಾದರಿ, ಹೊಸ ವೈಶಿಷ್ಟ್ಯಗಳೊಂದಿಗೆ ಐಫೋನ್ 17, ಸುಧಾರಿತ ಏರ್‌ಪಾಡ್ಸ್ ಪ್ರೊ 3 ಮತ್ತು ರಕ್ತದೊತ್ತಡ ಮಾನಿಟರ್ ಹೊಂದಿರುವ ಆಪಲ್ ವಾಚ್.

ಭಾರತದ ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಆಯ್ಕೆ

ಭಾರತದ 17ನೇ ಉಪರಾಷ್ಟ್ರಪತಿಯಾಗಿ ಮಹಾರಾಷ್ಟ್ರದ ಹಾಲಿ ರಾಜ್ಯಪಾಲ ಮತ್ತು ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು ಆಯ್ಕೆಯಾಗಿದ್ದಾರೆ.

ಸಾಂಬಾರಿಗೆ ರುಚಿ ಮಾತ್ರವಲ್ಲ, ಆರೋಗ್ಯಕ್ಕೂ ಒಳ್ಳೆಯದು: ಕೆಂಪು ಮೆಣಸಿನಕಾಯಿಯ ಪ್ರಯೋಜನಗಳು

ಅಡುಗೆಮನೆಯಲ್ಲಿ ಸಾಮಾನ್ಯವಾಗಿ ಬಳಸುವ ಕೆಂಪು ಮೆಣಸಿನಕಾಯಿ ಕೇವಲ ಆಹಾರಕ್ಕೆ ಖಾರ ಮತ್ತು ರುಚಿ ನೀಡುವುದಷ್ಟೇ ಅಲ್ಲ, ಇದು ಅನೇಕ ಆರೋಗ್ಯಕಾರಿ ಗುಣಗಳನ್ನು ಸಹ ಹೊಂದಿದೆ.