
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಕುರಿತು ಮಾಹಿತಿ ಹೊಂದಿರುವ ವ್ಯಕ್ತಿಯೊಬ್ಬನು ಪೊಲೀಸ್ ಠಾಣೆಗೆ ಶರಣಾಗಲು ಸಿದ್ಧನಿದ್ದಾನೆ ಎಂಬ ಹೇಳಿಕೆಯಿರುವ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ವೈರಲ್ ಆಗಿರುವ ಪತ್ರದಲ್ಲಿ ಬೆಂಗಳೂರಿನ ವಕೀಲರ ಹೆಸರು ನಮೂದಿಸಲಾಗಿದ್ದ ಹಿನ್ನೆಲೆಯಲ್ಲಿ ಧರ್ಮಸ್ಥಳ ಠಾಣೆ ಪೊಲೀಸರು ಅವರೊಂದಿಗೆ ಸಂಪರ್ಕ ಸಾಧಿಸಿದರು. ವಕೀಲರು ಮಾತನಾಡಿ, ಒಂದು ವ್ಯಕ್ತಿ ತಮ್ಮ ಬಳಿ ಬಂದು — “ಧರ್ಮಸ್ಥಳದಲ್ಲಿ ನಡೆದ ಅಪರಾಧಗಳ ಬಗ್ಗೆ ನನಗೆ ಮಾಹಿತಿ ಇದೆ. ನಾನು ಪೊಲೀಸ್ ಠಾಣೆಗೆ ಬಂದು ಅದನ್ನು ಹಂಚಿಕೊಳ್ಳಲು ಸಿದ್ಧ” ಎಂಬ ನಿರ್ಧಾರವನ್ನು ವ್ಯಕ್ತಪಡಿಸಿದ್ದಾನೆ, ಆ ವ್ಯಕ್ತಿಗೆ ಕಾನೂನುಬದ್ಧ ರಕ್ಷಣೆ ಒದಗಿಸಿದ ಬಳಿಕ, ಆತನನ್ನು ಹಾಜರುಪಡಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಅದರಂತೆ ಸದ್ರಿ ವ್ಯಕ್ತಿಯು ಹಾಜರಾಗಿ ಮಾಹಿತಿ ನೀಡಿದ್ದಲ್ಲಿ ನಂತರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.