ಯೂಟ್ಯೂಬರ್‌ಗಳ ಮೇಲೆ ಹಲ್ಲೆ ಪ್ರಕರಣ: ಧರ್ಮಸ್ಥಳದಲ್ಲಿ 6 ಜನರ ಬಂಧನ

Date:

spot_img

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲೆ ನಡೆದ ಹಲ್ಲೆ ಮತ್ತು ಪೊಲೀಸ್ ಠಾಣೆಯ ಮುಂದೆ ಗುಂಪು ಸೇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸರು 6 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದವು.

ಆಗಸ್ಟ್ 6ರಂದು ಸಂಜೆ ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್‌ನಲ್ಲಿ ಯೂಟ್ಯೂಬರ್‌ಗಳ ತಂಡದ ಮೇಲೆ ಹಲ್ಲೆ ನಡೆದಿತ್ತು. ಈ ಘಟನೆ ನಡೆದ ನಂತರ, ಧರ್ಮಸ್ಥಳ ಪೊಲೀಸ್ ಠಾಣೆಯ ಮುಂದೆ ದೊಡ್ಡ ಸಂಖ್ಯೆಯಲ್ಲಿ ಜನರು ಸೇರಿ ಅಹಿತಕರ ವಾತಾವರಣ ಸೃಷ್ಟಿಸಿದ್ದರು. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಬೇಕಾಯಿತು.

ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಆಗಸ್ಟ್ 9ರಂದು ಧರ್ಮಸ್ಥಳದ ನಿವಾಸಿಗಳಾದ ಪದ್ಮಪ್ರಸಾದ್, ಸುಹಾಸ್, ಗುರುಪ್ರಸಾದ್, ಶಶಿಕುಮಾರ್, ಕಲಂದರ್, ಮತ್ತು ಚೇತನ್ ಅವರನ್ನು ಬಂಧಿಸಿದರು. ಬಂಧಿತರನ್ನು ಶನಿವಾರ ಸಂಜೆ ಬೆಳ್ತಂಗಡಿ ನ್ಯಾಯಾಧೀಶರ ಮನೆಗೆ ಹಾಜರುಪಡಿಸಲಾಯಿತು. ವಿಚಾರಣೆ ನಂತರ, ನ್ಯಾಯಾಧೀಶರು 6 ಮಂದಿಗೂ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ಆಗಸ್ಟ್ 11ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗುವಂತೆ ನಿರ್ದೇಶಿಸಿದ್ದಾರೆ.

ಘಟನೆ ಕುರಿತು ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಸಮರ್ಥ ಆರ್. ಗಾಣಿಗೇರ್ ನೀಡಿದ ದೂರಿನನ್ವಯ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ (BNS), 2023ರ ಅಡಿಯಲ್ಲಿ (U/s-189(2),191(2),132,324(6),190) 27 ಮಂದಿ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಗುಂಪುಗಳು ಕಾನೂನುಬಾಹಿರವಾಗಿ ಸೇರಿ ಗಲಾಟೆ ನಡೆಸಿದ್ದವು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ಮುಂದುವರೆದಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರಾಹುಲ್ ಗಾಂಧಿ ಬಂಧನ: ಕಾರ್ಕಳ ಕಾಂಗ್ರೆಸ್ ಆಕ್ರೋಶ

ರಾಹುಲ್ ಗಾಂಧಿ ಬಂಧನ ಹಾಗೂ ವಿದ್ಯಾರ್ಥಿಗಳ ಮೇಲಿನ ಬಲಪ್ರಯೋಗ ಖಂಡಿಸಿ ಕಾರ್ಕಳ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಪೆರ್ವಾಜೆ ಸಾಯಿಬಾಬಾ ಮಂದಿರ ಅರ್ಚಕ ಲಕ್ಷ್ಮೀನಾರಾಯಣ ಭಟ್ ನಿಧನ

ಕಾರ್ಕಳದ ಪೆರ್ವಾಜೆ ಸಾಯಿಬಾಬಾ ಮಂದಿರದ ಪ್ರಧಾನ ಅರ್ಚಕ ಲಕ್ಷ್ಮೀನಾರಾಯಣ ಭಟ್ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.