ತನಿಖೆಗೂ ಮುನ್ನ ಧರ್ಮಸ್ಥಳದ ತೇಜೋವಧೆ ಸಲ್ಲದು: ಸಿ.ಟಿ. ರವಿ ಎಚ್ಚರಿಕೆ!

Date:

spot_img

ಬೆಂಗಳೂರು: ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್‌ಐಟಿ ನೇಮಕ ಮಾಡಿರುವುದನ್ನು ಸ್ವಾಗತಿಸುವುದಾಗಿ ಬಿಜೆಪಿ ನಾಯಕ ಸಿ.ಟಿ. ರವಿ ತಿಳಿಸಿದ್ದಾರೆ. ತನಿಖೆ ಪ್ರಾಮಾಣಿಕವಾಗಿ ಹಾಗೂ ಪಾರದರ್ಶಕವಾಗಿ ನಡೆಯಲಿ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ ಎಂದು ಹೇಳಿದ ಅವರು, ಆದರೆ ತನಿಖೆಗೂ ಮುನ್ನವೇ ಕೆಲವರು ತನಿಖೆ ನಡೆಸಿ ತೀರ್ಪು ಕೊಡುವ ಪ್ರವೃತ್ತಿ ಸ್ವೀಕಾರಾರ್ಹವಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಧರ್ಮಸ್ಥಳ ಎಂಬ ಸಂಸ್ಥೆಯನ್ನೇ ಅನುಮಾನಿಸುವ, ಮುಖ್ಯಸ್ಥರನ್ನೇ ತಪ್ಪಿತಸ್ಥರೆಂಬಂತೆ ಬಿಂಬಿಸುವ ಷಡ್ಯಂತ್ರದ ವಿರುದ್ಧ ನಾವಿದ್ದೇವೆ,” ಎಂದು ಸಿ.ಟಿ. ರವಿ ಸ್ಪಷ್ಟಪಡಿಸಿದರು. ಧರ್ಮಸ್ಥಳ ಟ್ರಸ್ಟ್ ಚೋಳರ ಕಾಲದ 293 ದೇವಾಲಯಗಳನ್ನು ಪುನರ್ ನಿರ್ಮಾಣ ಮಾಡಿದೆ. ಅಲ್ಲದೆ, 55 ಲಕ್ಷ ಸ್ವಯಂಸೇವಾ ಸಂಘಗಳ ಸದಸ್ಯರು ಧರ್ಮಸ್ಥಳದ ಗ್ರಾಮೀಣಾಭಿವೃದ್ಧಿ ಸಂಸ್ಥೆಯೊಂದಿಗೆ ಸೇರಿಕೊಂಡು ಕೆಲಸ ಮಾಡುತ್ತಿದ್ದಾರೆ ಎಂದು ಅವರು ವಿವರಿಸಿದರು.

“900 ಕೆರೆಗಳ ಜೀರ್ಣೋದ್ಧಾರ ಕೆಲಸವನ್ನು ಮಾಡಿದೆ. ಧರ್ಮಸ್ಥಳದ ತೇಜೋವಧೆ ಮಾಡುವುದನ್ನು ಅಥವಾ ವಿಚಾರಣೆ ಇಲ್ಲದೆ ಗಲ್ಲಿಗೇರಿಸುವುದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಇನ್ನು ಮುಂದೆಯೂ ಇದನ್ನು ಹೀಗೇ ಮುಂದುವರಿಸಿದರೆ ನಾವು ಬಿಡುವುದಿಲ್ಲ. ಸಜ್ಜನರ ಮೌನ ದುರ್ಜನರಿಗೆ ದಾರಿಯಾಗುವುದಕ್ಕೆ ನಾವು ಅವಕಾಶ ಮಾಡಿಕೊಡುವುದಿಲ್ಲ,” ಎಂದು ಸಿ.ಟಿ. ರವಿ ಬಲವಾಗಿ ಹೇಳಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.