
ಉಡುಪಿ : ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಉಪಾಧ್ಯಕ್ಷರಾಗಿ ದಿನಕರ ಶೆಟ್ಟಿ ಪುನರ್ ನೇಮಕಗೊಂಡಿದ್ದಾರೆ. ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಲೆವೂರು ಹರೀಶ್ ಕಿಣಿ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.
ದಿನಕರ ಶೆಟ್ಟಿ ಅವರು ಈ ಹಿಂದೆ ಕಾರ್ಕಳ ವಿಧಾನ ಸಭಾ ಕ್ಷೇತ್ರದ NSUI ಅಧ್ಯಕ್ಷರಾಗಿ, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಹಲವಾರು ಸಂಘ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಪ್ರಸ್ತುತ ಕೆಲವು ಸಂಘ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ.