spot_img

ಶಿಸ್ತು ಮತ್ತು ಕ್ರಮಭರಿತ ಅಧ್ಯಯನದಿಂದ ವಿದ್ಯಾರ್ಥಿಗಳ ಕಲಿಕೆ ಸಾಧ್ಯ : ಪ್ರೊ. ಬಿ ಪದ್ಮನಾಭ ಗೌಡ

Date:

spot_img

ಕಾರ್ಕಳ : “ವಿದ್ಯಾರ್ಥಿಗಳು ತಮ್ಮ ಅಧ್ಯಯನದೊಂದಿಗೆ ಶಿಸ್ತನ್ನು ಬೆಳೆಸಿಕೊಳ್ಳಬೇಕು. ಉತ್ತಮ ಗುರಿಯನ್ನು ಹೊಂದಿ ಹೆತ್ತವರ ಋಣ ತೀರಿಸಬೇಕು. ಕೆ.ಎಂ.ಇ.ಎಸ್ ವಿದ್ಯಾಸಂಸ್ಥೆಯು ಎಲ್ಲಾ ರೀತಿಯ ಸೌಲಭ್ಯವನ್ನು ಹೊಂದಿರುವುದರಿಂದ ಅದನ್ನು ಸರಿಯಾಗಿ ಉಪಯೋಗಿಸಿಕೊಂಡು ಕಲಿತು ಉತ್ತಮ ವ್ಯಕ್ತಿಗಳಾಗಿ ಹೊರಗೆ ಬರಬೇಕು. ಆಂಗ್ಲಭಾಷೆ ಅಂತರಾಷ್ಟ್ರೀಯ ಭಾಷೆ ಇದರಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಬಹುದು” ಎಂದು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಸ್ವಾಗತ ಕಾರ್ಯಕ್ರಮವನ್ನು ಉದ್ಘಾಟಿಸುತ್ತಾ ಶ್ರೀ ಭುವನೇಂದ್ರ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲರಾದ ಪ್ರೊ ಬಿ ಪದ್ಮನಾಭ ಗೌಡ ಇವರು ಹೇಳಿದರು.

ಈ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ವಿದ್ಯಾರ್ಥಿನಿ ಬಿ.ಬಿ ಆಯಿಷಾ ಸ್ವಾಗತಿಸಿದರು. ಪ್ರೌಢಶಾಲಾ ಮುಖ್ಯಸ್ಥ ಶ್ರೀಮತಿಯವರು ಪ್ರಾಸ್ತಾವಿಕ ಭಾಷಣ ಮಾಡಿದರು. ಪ್ರೊ. ಬಿ.ಪದ್ಮನಾಭ ಗೌಡ ಕಾರ್ಯಕ್ರಮ ಉದ್ಘಾಟಿಸಿದರು. ಆಡಳಿತ ಸಂಸ್ಥೆಯ ಸದಸ್ಯರಾದ ಶ್ರೀ ನದಾಫ್ ಅಹಮ್ಮದ್ ರವರು ಈ ಸಂಸ್ಥೆಯಲ್ಲಿ ವಿದ್ಯಾರ್ಥಿಯಾಗಿದ್ದ ಸಮಯದಲ್ಲಿ ವಿದ್ಯಾರ್ಥಿ ಜೀವನದ ಸಂತಸದ ಕ್ಷಣಗಳನ್ನು ಹಂಚಿಕೊಂಡರು. ಕಾಲೇಜಿನ ಪ್ರಾಂಶುಪಲಾರಾದ ಕೆ. ಬಾಲಕೃಷ್ಣ ರಾವ್‌ ರವರು ಅಧ್ಯಕ್ಷ ಭಾಷಣ ಮಾಡುತ್ತಾ ಪ್ರಸಕ್ತ ವರ್ಷದಲ್ಲಿ ನಡೆಸಬೇಕಾದ ಕಾಲೇಜಿನ ಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಶ್ರೀಜಿತ್ ಎಂಬ ವಿದ್ಯಾರ್ಥಿಯನ್ನು ಪ್ರಥಮ ಪಿಯುಸಿ ವಿಭಾಗಕ್ಕೆ ದತ್ತು ತೆಗೆದುಕೊಳ್ಳಲಾಯಿತು.

ಕಾಲೇಜಿನ ವಿದ್ಯಾರ್ಥಿನಿ ಸೃಷ್ಟಿಯವರು ವಂದಿಸಿದರು. ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ರಶೀದ್ ಇವರು ಕಾರ್ಯಕ್ರಮ ನಿರ್ವಹಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ: ಆರು IAS, ನಾಲ್ಕು IFS, ಓರ್ವ IPS ಅಧಿಕಾರಿಗಳ ವರ್ಗಾವಣೆ!

ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದ್ದು, ಆರು ಮಂದಿ ಐಎಎಸ್ ಅಧಿಕಾರಿಗಳು, ನಾಲ್ಕು ಐಎಫ್‌ಎಸ್ ಅಧಿಕಾರಿಗಳು ಹಾಗೂ ಓರ್ವ ಐಪಿಎಸ್ ಅಧಿಕಾರಿ ಸೇರಿದಂತೆ ಒಟ್ಟು 11 ಹಿರಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿ, ತಕ್ಷಣದಿಂದ ಜಾರಿಗೆ ಬರುವಂತೆ ಹೊಸ ಹುದ್ದೆಗಳನ್ನು ನಿಯೋಜಿಸಿದೆ.

ನೇತ್ರಾವತಿ ಸ್ನಾನಘಟ್ಟದ ನಾಲ್ಕನೇ ಸ್ಥಳದಲ್ಲಿ ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ಭೇಟಿ, ಪರಿಶೀಲನೆ

ಅನಾಮಿಕ ವ್ಯಕ್ತಿ ಗುರುತಿಸಿದ ನಾಲ್ಕನೇ ಸ್ಥಳದಲ್ಲಿನ ಅಗೆಯುವ ಕಾರ್ಯಾಚರಣೆಯನ್ನು ವೀಕ್ಷಿಸಲು ಎಸ್‌ಐಟಿ (ವಿಶೇಷ ತನಿಖಾ ದಳ) ಮುಖ್ಯಸ್ಥ ಡಾ. ಪ್ರಣಬ್ ಮೊಹಾಂತಿ ಅವರು ತನಿಖಾಧಿಕಾರಿಗಳಾದ ಅನುಚೇತ್ ಮತ್ತು ಎಸ್‌ಪಿ ಸಿ.ಎ. ಸೈಮನ್ ಅವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಪರಶುರಾಮ ಪ್ರತಿಮೆ ಸ್ಥಾಪನೆಗೆ ಆಗ್ರಹಿಸಿ ಮುನಿಯಾಲು ಉದಯಕುಮಾರ್ ಶೆಟ್ಟಿ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಅತ್ಯಂತ ಹಾಸ್ಯಾಸ್ಪದ -‌ ನವೀನ್‌ ನಾಯಕ್

ಪರಶುರಾಮ ಥೀಂ ಪಾರ್ಕ್ ಬಗ್ಗೆ ಇಲ್ಲಸಲ್ಲದ ಅಪಸ್ವರ ಎತ್ತಿ ಯೋಜನೆಯ ಅನುಷ್ಠಾನ ವಿಳಂಬವಾಗುವುದಕ್ಕೆ ಹಾಗೂ ಪ್ರವಾಸೋದ್ಯಮ ಕುಂಟಿತಗೊಳ್ಳುವುದಕ್ಕೆ ಉದಯಕುಮಾರ್ ಶೆಟ್ಟಿಯವರ ರಾಜಕೀಯ ಅವಕಾಶವಾದಿತನವೇ ಕಾರಣವಾಗಿದ್ದು, ಕಾರ್ಕಳದ ಜನತೆ ಈ ದ್ರೋಹವನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ.

ಧರ್ಮಸ್ಥಳ ಪ್ರಕರಣ: 3 ಸ್ಥಳಗಳಲ್ಲಿಯೂ ಸಿಗದ ಮೃತದೇಹ, ಎಸ್‌ಐಟಿಗೆ ಹೆಚ್ಚಿದ ತಲೆನೋವು!

ಧರ್ಮಸ್ಥಳದ ಅರಣ್ಯ ಪ್ರದೇಶದಲ್ಲಿ ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಅನಾಮಿಕ ಗುರುತಿಸಿದ 13 ಸ್ಥಳಗಳ ಪೈಕಿ 3ನೇ ಸ್ಥಳದಲ್ಲಿಯೂ ಯಾವುದೇ ಕಳೇಬರ ಪತ್ತೆಯಾಗದಿರುವುದು ಎಸ್‌ಐಟಿ (Special Investigation Team) ಅಧಿಕಾರಿಗಳಿಗೆ ತೀವ್ರ ತಲೆನೋವಾಗಿ ಪರಿಣಮಿಸಿದೆ.