
ಕಾರ್ಕಳ : “ವಿದ್ಯಾರ್ಥಿಗಳು ತಮ್ಮ ಅಧ್ಯಯನದೊಂದಿಗೆ ಶಿಸ್ತನ್ನು ಬೆಳೆಸಿಕೊಳ್ಳಬೇಕು. ಉತ್ತಮ ಗುರಿಯನ್ನು ಹೊಂದಿ ಹೆತ್ತವರ ಋಣ ತೀರಿಸಬೇಕು. ಕೆ.ಎಂ.ಇ.ಎಸ್ ವಿದ್ಯಾಸಂಸ್ಥೆಯು ಎಲ್ಲಾ ರೀತಿಯ ಸೌಲಭ್ಯವನ್ನು ಹೊಂದಿರುವುದರಿಂದ ಅದನ್ನು ಸರಿಯಾಗಿ ಉಪಯೋಗಿಸಿಕೊಂಡು ಕಲಿತು ಉತ್ತಮ ವ್ಯಕ್ತಿಗಳಾಗಿ ಹೊರಗೆ ಬರಬೇಕು. ಆಂಗ್ಲಭಾಷೆ ಅಂತರಾಷ್ಟ್ರೀಯ ಭಾಷೆ ಇದರಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಬಹುದು” ಎಂದು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಸ್ವಾಗತ ಕಾರ್ಯಕ್ರಮವನ್ನು ಉದ್ಘಾಟಿಸುತ್ತಾ ಶ್ರೀ ಭುವನೇಂದ್ರ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲರಾದ ಪ್ರೊ ಬಿ ಪದ್ಮನಾಭ ಗೌಡ ಇವರು ಹೇಳಿದರು.
ಈ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ವಿದ್ಯಾರ್ಥಿನಿ ಬಿ.ಬಿ ಆಯಿಷಾ ಸ್ವಾಗತಿಸಿದರು. ಪ್ರೌಢಶಾಲಾ ಮುಖ್ಯಸ್ಥ ಶ್ರೀಮತಿಯವರು ಪ್ರಾಸ್ತಾವಿಕ ಭಾಷಣ ಮಾಡಿದರು. ಪ್ರೊ. ಬಿ.ಪದ್ಮನಾಭ ಗೌಡ ಕಾರ್ಯಕ್ರಮ ಉದ್ಘಾಟಿಸಿದರು. ಆಡಳಿತ ಸಂಸ್ಥೆಯ ಸದಸ್ಯರಾದ ಶ್ರೀ ನದಾಫ್ ಅಹಮ್ಮದ್ ರವರು ಈ ಸಂಸ್ಥೆಯಲ್ಲಿ ವಿದ್ಯಾರ್ಥಿಯಾಗಿದ್ದ ಸಮಯದಲ್ಲಿ ವಿದ್ಯಾರ್ಥಿ ಜೀವನದ ಸಂತಸದ ಕ್ಷಣಗಳನ್ನು ಹಂಚಿಕೊಂಡರು. ಕಾಲೇಜಿನ ಪ್ರಾಂಶುಪಲಾರಾದ ಕೆ. ಬಾಲಕೃಷ್ಣ ರಾವ್ ರವರು ಅಧ್ಯಕ್ಷ ಭಾಷಣ ಮಾಡುತ್ತಾ ಪ್ರಸಕ್ತ ವರ್ಷದಲ್ಲಿ ನಡೆಸಬೇಕಾದ ಕಾಲೇಜಿನ ಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಶ್ರೀಜಿತ್ ಎಂಬ ವಿದ್ಯಾರ್ಥಿಯನ್ನು ಪ್ರಥಮ ಪಿಯುಸಿ ವಿಭಾಗಕ್ಕೆ ದತ್ತು ತೆಗೆದುಕೊಳ್ಳಲಾಯಿತು.
ಕಾಲೇಜಿನ ವಿದ್ಯಾರ್ಥಿನಿ ಸೃಷ್ಟಿಯವರು ವಂದಿಸಿದರು. ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ರಶೀದ್ ಇವರು ಕಾರ್ಯಕ್ರಮ ನಿರ್ವಹಿಸಿದರು.
































