ಮುದ್ರಾಡಿ ಪ್ರೌಢಶಾಲೆಯಲ್ಲಿ ಕ್ರೀಡಾ ಸಮವಸ್ತ್ರ ವಿತರಣೆ

Date:

spot_img

ಹೆಬ್ರಿ : “ಮಕ್ಕಳ ಮನಸ್ಸು ಪಾಠಕ್ಕಿಂತಲೂ ಆಟದ ಕಡೆಗೆ ಹೆಚ್ಚು ಹಾತೊರೆಯುವಂತದ್ದು. ಆಟದ ನಂತರ ಪಾಠ ಇದ್ದಾಗ ಅವರ ಮೈ ಮನಸ್ಸು ತುಂಬಾ ಪ್ರಫುಲ್ಲಗೊಳ್ಳುತ್ತದೆ. ಕಲಿಕೆ ಸುಗಮವಾಗುತ್ತದೆ. ಜ್ಞಾನಕ್ಕಿಂತಲೂ ಮಿಗಿಲಾದದ್ದು ಯಾವುದು ಇಲ್ಲ. ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಗುರಿಯನ್ನು ಈಗಲೇ ಹೊಂದಿರಬೇಕು. ಮತ್ತು ಅದಕ್ಕೆ ಪೂರಕವಾಗಿ ಸಾಗಬೇಕು. ಕಠಿಣ ಪರಿಶ್ರಮದ ಫಲ ಸಿಹಿಯಾಗಿರುತ್ತದೆ” ಎಂದು ಕಾಪು ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕ ಹಾಗೂ ಶಾಲೆಯ ಹಳೆ ವಿದ್ಯಾರ್ಥಿ ಶ್ರೀ ಸುನಿಲ್ ಕುಮಾರ್ ಶೆಟ್ಟಿ ಗುಮ್ಮಗುಂಡಿ ಬಲ್ಲಾಡಿ ಹೇಳಿದರು. ಅವರು ಎಂ.ಎನ್.ಡಿ.ಎಸ್.ಎಂ.ಅನುದಾನಿತ ಪ್ರೌಢಶಾಲೆ ಮುದ್ರಾಡಿಯಲ್ಲಿ ಕ್ರೀಡಾ ಸಮವಸ್ತ್ರ ವಿತರಿಸಿ ಮಾತನಾಡಿದರು.ಅವರು 1994-95ರ ಸಾಲಿನ ಹಿರಿಯ ವಿದ್ಯಾರ್ಥಿನಿ ಮತ್ತು 2001-02 ರ ಸಾಲಿನ ಹಿರಿಯ ವಿದ್ಯಾರ್ಥಿಗಳು ಒಟ್ಟಾಗಿ ಕೊಡಮಾಡಿದ ಕ್ರೀಡಾ ಸಮವಸ್ತ್ರದ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.

ವಿದ್ಯಾಸಾಗರ ಎಜ್ಯುಕೇಶನ್ ಟ್ರಸ್ಟ್ (ರಿ) ನ ಕಾರ್ಯದರ್ಶಿ ಶ್ರೀ ಅಶೋಕ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಶಾಲೆಯ ಹಳೆ ವಿದ್ಯಾರ್ಥಿಗಳು ನೀಡಿದ ಕೊಡುಗೆಗೆ ಕೃತಜ್ಞತೆ ಸಲ್ಲಿಸಿದರು. ವೇದಿಕೆಯಲ್ಲಿ ಮಣಿಪಾಲ ಎಂ.ಐ.ಟಿ. ಯ ಕಂಪ್ಯೂಟರ್ ಸೈನ್ಸ್ ವಿಭಾಗದ ಉಪನ್ಯಾಸಕಿ ಶ್ರೀಮತಿ ರೂಪಶ್ರೀ , ಮುದ್ರಾಡಿ ಸಮೃದ್ಧಿಯ ಸುನೀಲ್ ಉಪಸ್ಥಿತರಿದ್ದರು.

ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಶ್ರೀ ಚಂದ್ರಶೇಖರ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಹಿರಿಯ ಶಿಕ್ಷಕ ಶ್ರೀ ಮಹೇಶ ನಾಯ್ಕ. ಕೆ. ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಶ್ರೀ ರಘುಪತಿ ಹೆಬ್ಬಾರ್ ವಂದಿಸಿದರು. ಶಿಕ್ಷಕರಾದ ಶ್ರೀ ಆನಂದ ಪಿ. ವಿ. , ಶ್ರೀಮತಿ ಶ್ಯಾಮಲಾ ಕೊಠಾರಿ , ಶ್ರೀಮತಿ ಚಂದ್ರಕಾಂತಿ ಹೆಗ್ಡೆ ಹಾಗೂ ಶಿಕ್ಷಕೇತರ ಸಿಬ್ಬಂದಿ ಶ್ರೀ ಮಹೇಶ್ ಎಂ. ಸಹಕರಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.