ವಿಶೇಷ ಸಾಧನೆಗೈದ ಬಸವೇಶ್ವರ ಆಸ್ಪತ್ರೆಯ ವೈದ್ಯೆ ಡಾ ಅನಿತಾ ಗೌರಾ ಕೋಣಿನ್

Date:

spot_img

ಕಲಬುರ್ಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಡಾ. ಅನಿತಾ ಗೌರಾ ಕೋಣಿನ್ ಅವರು ನವದೆಹಲಿಯಲ್ಲಿ ನಡೆದ ಗ್ಲೋಬಲ್ ಎಐ ಇಂಪ್ಯಾಕ್ಟ ಸಮೀಟ್2026 ರಲ್ಲಿ ಆಯ್ಕೆಯಾಗಿ ಭಾಗವಹಿಸುವುದರ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದು, ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಹೆಮ್ಮೆಯ ಸಾಧಕಿಯಾಗಿದ್ದಾರೆ.

ಈ ಸಮಿಟ್‌ನಲ್ಲಿ 135 ದೇಶಗಳಿಂದ 15,500 ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದವು. ನಂತರ ಸಮಿಟ್ ಸಮಿತಿಯು ವೈದ್ಯಕೀಯ ಕ್ಷೇತ್ರದಲ್ಲಿ ತಮ್ಮ ತಮ್ಮ ವಿಭಾಗಗಳಲ್ಲಿ ವಿಶೇಷ ಸಾಧನೆ ಮಾಡಿದವರನ್ನು ಪರಿಶೀಲಿಸಿ ಪ್ರಥಮ ಹಂತದಲ್ಲಿ 791 ಸ್ಪರ್ಧಾರ್ಥಿಗಳನ್ನು ಆಯ್ಕೆ ಮಾಡಿತು. ಆ ಬಳಿಕ ಈ 791 ಸ್ಪರ್ಧಾರ್ಥಿಗಳಿಗೆ ಸಮಿಟ್‌ನ ಜ್ಯೂರಿ ಸಮಿತಿಯು ಆನ್‌ಲೈನ್ ಸಂದರ್ಶನ ನಡೆಸಿ ಅಂತಿಮವಾಗಿ 150 ಮಂದಿ ವೈದ್ಯರನ್ನು ಆಯ್ಕೆ ಮಾಡಿತು.

ಜಾಗತಿಕ ಮಟ್ಟದಲ್ಲಿ ಡಾ. ಅನಿತಾ ಗೌರಾ ಕೋಣಿನ್ ಅವರು ಟಾಪ್ 150ರಲ್ಲಿ ಸ್ಥಾನ ಪಡೆದಿರುವುದು ಅತ್ಯಂತ ಹೆಮ್ಮೆಯ ಹಾಗೂ ಪ್ರಶಂಸನೀಯ ಸಾಧನೆಯಾಗಿದೆ. ಜಾಗತಿಕ ಮಟ್ಟದ ಈ ಕಾರ್ಯಕ್ರಮಕ್ಕೆ ಇವರಿಗೆ ಅಧಿಕೃತವಾಗಿ ಆಹ್ವಾನ ಬಂದಿರುವದರ ಜೋತೆ ಮೊಬೈಲ್ ಅಪ್ಲಿಕೇಷನ್ ನಲ್ಲಿಯು ಸಹ ಇವರ ಹೆಸರನ್ನು ಪ್ರಕಟಿಸಲಾಗಿತ್ತು. ಅಧಿಕೃತ ಆಹ್ವಾನದ ಮೇರೆಗೆ ದಿನಾಂಕ 16/02/2026 ರಿಂದ 20/02/2026 ರ ವರೆಗೆ ನವದೆಹಲಿಯಲ್ಲಿ ನಡೆಯುತ್ತಿರುವ ಈ ಸಮೀಟ್ ನಲ್ಲಿ ಭಾಗವಹಿಸಿದ್ದಾರೆ. ಇಂತಹ ವಿಶೇಷ ಸಾಧನೆ ಮಾಡಿದ ನಮ್ಮ ಸಂಸ್ಥೆಯ ವೈದ್ಯರನ್ನು ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ ಶಶೀಲ್ ಜಿ ನಮೋಶಿ ಉಪಾಧ್ಯಕ್ಷರಾದ ಶ್ರೀ ರಾಜಾ ಭಿ ಭೀಮಳ್ಳಿ, ಕಾರ್ಯದರ್ಶಿಗಳಾದ ಶ್ರೀ ಉದಯಕುಮಾರ್ ಚಿಂಚೋಳಿ, ಜಂಟಿ ಕಾರ್ಯಾದರ್ಶಿಗಳಾದ ಡಾ ಕೈಲಾಸ ಪಾಟೀಲ್ ಆಸ್ಪತ್ರೆಯ ಸಂಚಾಲಕರಾದ ಡಾ ಕಿರಣ ದೇಶಮುಖ್, ವೈದ್ಯಕೀಯ ಕಾಲೇಜಿನ ಅಧೀಕ್ಷಕರಾದ ಡಾ ಶರಣಬಸಪ್ಪ ಹರವಾಳ ಎಲ್ಲಾ ಆಡಳಿತ ಮಂಡಳಿ ಸದಸ್ಯರು, ಡೀನ್ ಡಾ ಶರಣಗೌಡ ಪಾಟೀಲ್, ವೈದ್ಯಕೀಯ ಅಧೀಕ್ಷಕರಾದ ಡಾ ಮಲ್ಲಿಕಾರ್ಜುನ ತೇಗನೂರ, ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞರಾದ ಡಾ ಮೀನಾಕ್ಷಿ ದೇವರಮನಿ ಅಭಿನಂದಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.